ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸಲು ಭಾರತದ ಆಹ್ವಾನವನ್ನು ಸ್ವೀಕರಿಸಿದ ಬ್ರಿಟನ್ ಪ್ರಧಾನಿ

2021ರ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಭಾರತ ನೀಡಿದ್ದ ಆಹ್ವಾನವನ್ನು ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಸ್ವೀಕರಿಸಿದ್ದಾರೆ.

Published: 15th December 2020 02:53 PM  |   Last Updated: 15th December 2020 03:57 PM   |  A+A-


UK_PM1

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್

Posted By : Nagaraja AB
Source : PTI

ನವದೆಹಲಿ: 2021ರ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಭಾರತ ನೀಡಿದ್ದ ಆಹ್ವಾನವನ್ನು ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಸ್ವೀಕರಿಸಿದ್ದಾರೆ.

ಬ್ರಿಟನ್ ವಿದೇಶಾಂಗ ಕಾರ್ಯದರ್ಶಿ ಡೊಮಿನಿಕ್ ರಾಬ್, ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಜೊತೆಗಿನ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯವನ್ನು ದೃಢಪಡಿಸಿದರು. ಗಣರಾಜ್ಯೋತ್ಸವದ ಮುಖ್ಯ  ಅತಿಥಿಯಾಗಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಆಗಮಿಸುತ್ತಿರುವುದಾಗಿ ಹೇಳಿದರು.

ಜನವರಿಯಲ್ಲಿ ನಡೆಯಲಿರುವ ಭಾರತದ ಗಣರಾಜ್ಯೋತ್ಸವ ದಿನದ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳುವುದು ದೊಡ್ಡ ಗೌರವವಾಗಿದೆ. ಭಾರತದ ಆಹ್ವಾನವನ್ನು ಬ್ರಿಟನ್ ಪ್ರಧಾನಿ ಜಾನ್ಸನ್ ಸ್ವೀಕರಿಸಿದ್ದಾರೆ ಎಂದರು.

ಮುಂದಿನ ವರ್ಷ ಬ್ರಿಟನ್ ಆಯೋಜಿಸಿರುವ ಜಿ-7 ಶೃಂಗಸಭೆಯಲ್ಲಿ ಪ್ರಧಾನಿ ಮೋದಿಯನ್ನು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಆಹ್ವಾನಿಸಿರುವುದು ಅತೀವ ಸಂತೋಷವನ್ನುಂಟು ಮಾಡಿದೆ ಎಂದು ಡೊಮಿನಿಕ್ ರಾಬ್ ಹೇಳಿದರು.


Stay up to date on all the latest ರಾಷ್ಟ್ರೀಯ news
Poll
lokasbha

ಸಂಸತ್ತಿನ ಕಲಾಪಗಳಿಗೆ ಅಡ್ಡಿಪಡಿಸುವ ಸಂಸದರಿಗೆ ದಂಡ ವಿಧಿಸಬೇಕೇ?


Result
ಹೌದು, ಇವರಿಂದ ಸಮಯ ವ್ಯರ್ಥ
ಬೇಡ, ಅವರು ಪ್ರತಿಭಟಿಸಬೇಕು
flipboard facebook twitter whatsapp