28,000 ಕೋಟಿ ರೂ. ಮೌಲ್ಯದ ಶಸ್ತ್ರಾಸ್ತ್ರ, ಮಿಲಿಟರಿ ಉಪಕರಣ ಖರೀದಿಗೆ ರಕ್ಷಣಾ ಸಚಿವಾಲಯ ಅಸ್ತು

ರಕ್ಷಣಾ ಸಚಿವಾಲ ಮೂರು ಸೇವೆಗಳಿಗೆ 28,000 ಕೋಟಿ ರೂ. ಮೌಲ್ಯದ ಶಸ್ತ್ರಾಸ್ತ್ರ ಮತ್ತು ಮಿಲಿಟರಿ ಉಪಕರಣಗಳನ್ನು ಖರೀದಿಸಲು ಗುರುವಾರ ಅನುಮೋದನೆ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಯುಧಗಳನ್ನು ಪರಿಶೀಲಿಸುತ್ತಿರುವ ರಕ್ಷಣಾ ಸಚಿವರು(ಸಂಗ್ರಹ ಚಿತ್ರ)
ಆಯುಧಗಳನ್ನು ಪರಿಶೀಲಿಸುತ್ತಿರುವ ರಕ್ಷಣಾ ಸಚಿವರು(ಸಂಗ್ರಹ ಚಿತ್ರ)

ನವದೆಹಲಿ: ರಕ್ಷಣಾ ಸಚಿವಾಲ ಮೂರು ಸೇವೆಗಳಿಗೆ 28,000 ಕೋಟಿ ರೂ. ಮೌಲ್ಯದ ಶಸ್ತ್ರಾಸ್ತ್ರ ಮತ್ತು ಮಿಲಿಟರಿ ಉಪಕರಣಗಳನ್ನು ಖರೀದಿಸಲು ಗುರುವಾರ ಅನುಮೋದನೆ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೂರ್ವ ಲಡಾಕ್‌ನಲ್ಲಿ ಭಾರತ ಮತ್ತು ಚೀನಾ ನಡುವೆ ಸಂಘರ್ಷ ನಡೆಯುತ್ತಿರುವ ಸಮಯದಲ್ಲೇ ಶಸ್ತ್ರಾಸ್ತ್ರ ಖರೀದಿಗೆ ರಕ್ಷಣಾ ಸಚಿವಾಲಯ ಒಪ್ಪಿಗೆ ನೀಡಿದೆ.

ಈ ಒಪ್ಪಿಗೆ ನೀಡಿರುವ ಬಹುತೇಕ ಶಸ್ತ್ರಾಸ್ತ್ರಗಳು ಮತ್ತು ಮಿಲಿಟರಿ ಉಪಕರಣಗಳನ್ನು ದೇಶೀಯ ಉದ್ಯಮದಿಂದಲೇ ಖರೀದಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೇಕ್ ಇನ್ ಇಂಡಿಯಾ ಉಪಕ್ರಮಕ್ಕೆ ಭಾರೀ ಉತ್ತೇಜನ ನೀಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯ ರಕ್ಷಣಾ ಖರೀದಿ ಮಂಡಳಿ(ಡಿಎಸಿ), ದೇಶೀಯ ಉದ್ಯಮಗಳಿಂದ 27,000 ಕೋಟಿ ರೂ. ಮೊತ್ತದ ಶಸ್ತ್ರಾಸ್ತ್ರ ಖರೀದಿಗೆ ಅನುಮೋದನೆ ನೀಡಿದೆ ಎಂದು ರಕ್ಷಣಾ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಭಾರತೀಯ ಸೇನೆ, ಭಾರತೀಯ ನೌಕಾಪಡೆ ಮತ್ತು ಭಾರತೀಯ ವಾಯುಪಡೆಗೆ ಅಗತ್ಯವಿರುವ ವಿವಿಧ ಶಸ್ತ್ರಾಸ್ತ್ರಗಳು, ವೇದಿಕೆಗಳು, ಸಾಧನಗಳು ಸೇರಿದಂತೆ ವಿವಿಧ ಪ್ರಸ್ತಾಪಗಳನ್ನು ಒಳಗೊಂಡ ಒಟ್ಟು 28,000 ಕೋಟಿ ರೂ.ಮೊತ್ತಕ್ಕೆ ಡಿಎಸಿ ಅನುಮೋದಿಸಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com