ರೈತರಿಗೆ ಪ್ರತಿಭಟಿಸುವ ಹಕ್ಕಿದೆ, ಆದರೆ...': ಬಿಕ್ಕಟ್ಟು ಪರಿಹಾರಕ್ಕೆ ಸಮಿತಿ ರಚಿಸಲು ಸುಪ್ರೀಂ ಕೋರ್ಟ್ ಚಿಂತನೆ

ರೈತರ ಅಹಿಂಸಾತ್ಮಕ ಪ್ರತಿಭಟನೆ ಹಕ್ಕನ್ನು ಇಂದು ಒಪ್ಪಿಕೊಂಡಿರುವ ಸುಪ್ರೀಂ ಕೋರ್ಟ್, ಮೂರು ಹೊಸ ವಿವಾದಾತ್ಮಕ ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ಉಂಟಾಗಿರುವ ಬಿಕ್ಕಟ್ಟನ್ನು ಪರಿಹರಿಸಲು ನಿಷ್ಪಕ್ಷಪಾತ ಮತ್ತು ಸ್ವತಂತ್ರ ಸಮಿತಿಯನ್ನು ಸ್ಥಾಪಿಸುವ ಬಗ್ಗೆ ಚಿಂತಿಸುತ್ತಿರುವುದಾಗಿ ಹೇಳಿದೆ.
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್

ನವದೆಹಲಿ: ರೈತರ ಅಹಿಂಸಾತ್ಮಕ ಪ್ರತಿಭಟನೆ ಹಕ್ಕನ್ನು ಇಂದು ಒಪ್ಪಿಕೊಂಡಿರುವ ಸುಪ್ರೀಂಕೋರ್ಟ್, ಮೂರು ನೂತನ ವಿವಾದಾತ್ಮಕ ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ಉಂಟಾಗಿರುವ ಬಿಕ್ಕಟ್ಟನ್ನು ಪರಿಹರಿಸಲು ಕೃಷಿ ತಜ್ಞರು ಮತ್ತು ರೈತ ಸಂಘಗಳನ್ನೊಳಗೊಂಡ ನಿಷ್ಪಕ್ಷಪಾತ ಮತ್ತು ಸ್ವತಂತ್ರ ಸಮಿತಿಯನ್ನು ಸ್ಥಾಪಿಸುವ ಬಗ್ಗೆ ಚಿಂತಿಸುತ್ತಿರುವುದಾಗಿ ಹೇಳಿದೆ.

ಶಾಸನಗಳಿಗೆ ಸಂಬಂಧಿಸಿದ ಬಿಕ್ಕಟ್ಟನ್ನು ಪರಿಹರಿಸಲು ಪಿ. ಸಾಯಿನಾಥ್ ಅವಂತಹ ತಜ್ಞರು, ಸರ್ಕಾರದ ಪ್ರತಿನಿಧಿಗಳು ಮತ್ತು ರೈತ ಸಂಘಗಳನ್ನೊಳಗೊಂಡ ಸಮಿತಿಯನ್ನು ರಚಿಸುವುದಾಗಿ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ನೇತೃತ್ವದ ತ್ರಿಸದಸ್ಯ ನ್ಯಾಯಪೀಠ ತಿಳಿಸಿದೆ.

ರೈತರಿಗೆ ಪ್ರತಿಭಟಿಸುವ ಹಕ್ಕಿರುವುದನ್ನು ಒಪ್ಪಿಕೊಳ್ಳುತ್ತೇವೆ ಆದರೆ, ಅದು ಅಹಿಂಸಾತ್ಮಾಕವಾಗಿರಬೇಕು ಎಂದು ಎಸ್.ಎ ಬೊಪ್ಪಣ್ಣ, ವಿ. ರಾಮಸುಬ್ರಮಣಿಯನ್ ಅವರನ್ನೊಳಗೊಂಡ ನ್ಯಾಯಪೀಠ ಹೇಳಿತು.

ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ಉನ್ನತ ನ್ಯಾಯಾಲಯ, ಒಂದು ವೇಳೆ ರೈತರು ಮತ್ತು ಸರ್ಕಾರದ ನಡುವೆ ಮಾತುಕತೆ ನಡೆದರೆ ಪ್ರತಿಭಟನೆಯ ಉದ್ದೇಶದ ಗುರಿ ಸಾಧಿಸಿದಂತಾಗುತ್ತದೆ. ನಾವು ಸಮಸ್ಯೆಯನ್ನು ಬಗೆಹರಿಸಬಹುದು ಎಂದಿತು.

ನಾವು ಇಂದು ಕಾನೂನಿನ ಸಿಂಧುತ್ವವನ್ನು ನಿರ್ಧರಿಸುವುದಿಲ್ಲ. ಪ್ರತಿಭಟನೆಯ ವಿಷಯ ಮತ್ತು ಮುಕ್ತವಾಗಿ ನಡೆಯುವುದನ್ನು ಮಾತ್ರ ನಾವು ನಿರ್ಧರಿಸುತ್ತೇವೆ ಎಂದು ವಿಚಾರಣೆಯ ಪ್ರಾರಂಭದಲ್ಲಿ ನ್ಯಾಯಪೀಠ ಸ್ಪಷ್ಟಪಡಿಸಿತು. ವಿಚಾರಣೆ ಇನ್ನೂ ನಡೆಯುತ್ತಿದೆ.

ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯನ್ನು ನಿಲ್ಲಿಸುವಂತೆ ಕೋರಿ ಸಲ್ಲಿಸಲಾಗಿರುವ ಹಲವು ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಡೆಸುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com