ರೈತರ ಪ್ರತಿಭಟನೆ: ನಾಳೆ ಹೊಸ ಕೃಷಿ ಕಾನೂನಿನ 'ಪ್ರಯೋಜನಗಳು' ಕುರಿತು ಪ್ರಧಾನಿ ಮೋದಿ ಭಾಷಣ

ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯ ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 22 ದಿನ ತಲುಪಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಕೃಷಿ ಕಾನೂನುಗಳ ಪ್ರಯೋಜನೆಗಳ ಕುರಿತು ಶುಕ್ರವಾರ ಮಾತನಾಡಲಿದ್ದಾರೆ.
ಸಿಂಘು ಗಡಿಭಾಗದಲ್ಲಿ ರೈತರ ಪ್ರತಿಭಟನೆ
ಸಿಂಘು ಗಡಿಭಾಗದಲ್ಲಿ ರೈತರ ಪ್ರತಿಭಟನೆ

ಭೋಪಾಲ್: ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯ ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 22 ದಿನ ತಲುಪಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಕೃಷಿ ಕಾನೂನುಗಳ ಪ್ರಯೋಜನೆಗಳ ಕುರಿತು ಶುಕ್ರವಾರ ಮಾತನಾಡಲಿದ್ದಾರೆ.

ಪ್ರಧಾನಿ ಮೋದಿ ಅವರು ರಾಜ್ಯಮಟ್ಟದ ಕಾರ್ಯಕ್ರಮದ ಅಂಗವಾಗಿ ನಾಳೆ ವರ್ಚುವಲ್ ಮೂಲಕ ಮಧ್ಯಪ್ರದೇಶದ ರೈತರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರು ನಾಳೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ರಾಜ್ಯದ ರೈತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮಧ್ಯಪ್ರದೇಶದ ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮಧ್ಯ ಪ್ರದೇಶ ಸರ್ಕಾರ ರೈಸನ್ ಜಿಲ್ಲೆಯಲ್ಲಿ ರಾಜ್ಯಮಟ್ಟದ 'ಕಿಸಾನ್ ಕಲ್ಯಾಣ್' ಕಾರ್ಯಕ್ರಮವನ್ನು ಆಯೋಜಿಸಿದ್ದು,  ಇದರಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ 1,600 ಕೋಟಿ ರೂ.ಗಳ ಪರಿಹಾರ ಮೊತ್ತವನ್ನು ಸುಮಾರು 35.50 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ರೈಸನ್‌ನಲ್ಲಿ ನಡೆಯುವ ಈ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಸುಮಾರು 20,000 ರೈತರು ಭಾಗವಹಿಸಲಿದ್ದು, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಅವರು ಮಾತನಾಡಿದ ನಂತರ ಪ್ರಧಾನಿ ಮೋದಿ ಅವರು ರೈತರ ಉದ್ದೇಶಿಸಿ ಮಾತನಾಡಲಿದ್ದಾರೆ. ಈ ವೇಳೆ ಹೊಸ ಕೃಷಿ ಕಾನೂನಿನ ಪ್ರಯೋಜನಗಳ ಪ್ರಧಾನಿ ವಿವರಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ಮಧ್ಯೆ, ಪ್ರತಿಭಟನಾಕಾರರ ಸಂಧಾನಕ್ಕೆ ಸಮಿತಿ ರಚಿಸುವಂತೆ ಸುಪ್ರೀಂಕೋರ್ಟ್‌ ಕೇಂದ್ರ ಸರ್ಕಾರಕ್ಕೆ ಆದೇಶಿಸಿರುವುದು ತಮಗೆ ನೈತಿಕ ಗೆಲುವು ಎಂದು ರೈತರು ಹೇಳಿದ್ದಾರೆ. ಅಲ್ಲದೆ ಮುಂದಿನ ಹೋರಾಟದ ಬಗ್ಗೆ ಶುಕ್ರವಾರ ಹಿರಿಯ ವಕೀಲರಾದ ಕಾಲಿನ್ ಗೊನ್ಸಾಲ್ವೆಸ್, ದುಶ್ಯಂತ್ ಡೇವ್, ಹೆಚ್ ಎಸ್ ಫೂಲ್ಕಾ ಮತ್ತು ಪ್ರಶಾಂತ್ ಭೂಷಣ್ ಅವರನ್ನು ಭೇಟಿ ಮಾಡಿ ಸಮಾಲೋಚಿಸುತ್ತೇವೆ ಎಂದು ರಾಷ್ಟ್ರೀಯ ಕಿಸಾನ್ ಮಜ್ದೂರ್ ಸಭೆಯ ಮುಖಂಡ ಅಭಿಮನ್ಯು ಕೊಹಾರ್ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com