ಹತ್ರಾಸ್ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ: ಚಾರ್ಜ್ ಶೀಟ್ ದಾಖಲಿಸಿದ ಸಿಬಿಐ

ಹತ್ರಾಸ್ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ಚಾರ್ಜ್ ಶೀಟ್ ದಾಖಲಿಸಿದೆ. 

Published: 18th December 2020 03:51 PM  |   Last Updated: 18th December 2020 03:51 PM   |  A+A-


Hathras Case

ಹತ್ರಾಸ್ ಪ್ರಕರಣ

Posted By : Srinivasamurthy VN
Source : PTI

ಲಖನೌ: ಹತ್ರಾಸ್ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ಚಾರ್ಜ್ ಶೀಟ್ ದಾಖಲಿಸಿದೆ. 

ಹೌದು.. ಉತ್ತರಪ್ರದೇಶದ ಹತ್ರಾಸ್ ಎಂಬಲ್ಲಿ ಯುವತಿಯೋರ್ವಳನ್ನು ಸಾಮೂಹಿಕ ಅತ್ಯಾಚಾರ ಮಾಡಿ ಕೊಲೆಗೈಯಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಸಿಬಿಐ ವರದಿ ಸಲ್ಲಿಸಿದೆ. ಪ್ರಕರಣ ನಡೆದು ಮೂರು ತಿಂಗಳಾದ ಬಳಿಕ ಸಿಬಿಐ ಈ ಕುರಿತು ಚಾರ್ಜ್ ಶೀಟ್  ಸಲ್ಲಿಸಿದ್ದು, ಯುವತಿಯನ್ನು ಸಾಮೂಹಿಕ ಅತ್ಯಾಚಾರ ಮಾಡಿ ಕೊಲೆಗೈಯಲಾಗಿದೆ ಎಂದು  ಚಾರ್ಜ್ ಶೀಟ್ ನಲ್ಲಿ ಆರೋಪಿಸಲಾಗಿದೆ.

ಯುವತಿಯನ್ನು ದಾಖಲಿಸಲಾಗಿದ್ದ ಆಸ್ಪತ್ರೆಯ ವೈದ್ಯರ ಹೇಳಿಕೆಗಳನ್ನೂ ಪಡೆದು, ಫೊರೆನ್ಸಿಕ್ ಪರೀಕ್ಷೆಗಳನ್ನೂ (ವಿಧಿ ವಿಜ್ಞಾನ ಪ್ರಯೋಗಾಲಯ) ನಡೆಸಿರುವ ತನಿಖಾ ತಂಡವು ದೆಹಲಿಯಿಂದ 200ಕಿ.ಮೀ ದೂರದಲ್ಲಿರುವ ಹತ್ರಾಸ್ ನ ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ ಸಲ್ಲಿಸಿದೆ.  ಆರೋಪಿಗಳ ವಿರುದ್ಧ ಪರಿಶಿಷ್ಟ ಜಾತಿ/ಪಂಗಡ ದೌಜರ್ನ್ಯ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಲಾಗಿದ್ದು, ಚಾರ್ಜ್ ಶೀಟ್ ನಲ್ಲಿ ಸಂದೀಪ್, ಲವಕುಶ್, ರವಿ ಮತ್ತು ರಾಮು ಎಂಬುವವರ ಹೆಸರು ಉಲ್ಲೇಖಿಸಲಾಗಿದೆ.

ಸೆ.14ರಂದು ಮೇಲ್ಜಾತಿಗೆ ಸೇರಿದ ನಾಲ್ವರು ಯುವಕರು ಯುವತಿಯೋರ್ವಳನ್ನು ಅತ್ಯಾಚಾರ ಮಾಡಿದ್ದರು. ಸೆ.29ರಂದು ಯುವತಿ ಸಫ್ಜರ್ ಜಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು.  ಕೊಲೆಗೈದಿದ್ದರು. ಯುವತಿಯು ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಳು. ಮೃತಪಟ್ಟ  ಯುವತಿಯ ಮೃತದೇಹವನ್ನು ಪೊಲೀಸರು ಅದೇ ದಿನದ ರಾತ್ರಿ ಅಂದರೆ ಸೆ.30ರಂದು ತರಾತುರಿಯಲ್ಲಿ ಕುಟುಂಬದ ಅನುಮತಿಯನ್ನೂ ಪಡೆಯದೇ ಸಂಸ್ಕಾರ ಮಾಡಿದ್ದರು ಎಂದು ಆರೋಪಿಸಲಾಗಿದೆ. ಈ ಪ್ರಕರಣ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. 

ಆದಾಗ್ಯೂ, ಸ್ಥಳೀಯ ಪೊಲೀಸ್ ಅಧಿಕಾರಿಗಳು "ಕುಟುಂಬದ ಇಚ್ಛೆಯಂತೆ" ಅಂತ್ಯಕ್ರಿಯೆ ನಡೆಸಲಾಗಿದೆ ಎಂದು ಹೇಳಿದ್ದರು. ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಂದೀಪ್, ಲವ್ಕುಶ್, ರವಿ ಮತ್ತು ರಾಮು ಅವರ ಪಾತ್ರವನ್ನು ಸಂಸ್ಥೆ ಪರಿಶೀಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದರು.  ಗಾಂಧಿನಗರದ ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯದಲ್ಲಿ ವಿವಿಧ ವಿಧಿವಿಜ್ಞಾನ ಪರೀಕ್ಷೆಗಳ ಮೂಲಕ ಅವರನ್ನು ಇರಿಸಲಾಗಿತು ಎಂದು ಅವರು ಹೇಳಿದರು. ಸಿಬಿಐ ತನಿಖಾಧಿಕಾರಿಗಳು ಜವಾಹರಲಾಲ್ ನೆಹರು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯರನ್ನು ಭೇಟಿ ಮಾಡಿದ್ದರು,

ಈ ಪ್ರಕರಣ ಉತ್ತರ ಪ್ರದೇಶ ಸರ್ಕಾರಕ್ಕೆ ತೀವ್ರ ಮುಜುಗರವನ್ನುಂಟು ಮಾಡಿತ್ತು. ತೀವ್ರ ಪ್ರತಿಭಟನೆ ಬಳಿಕ ಈ ಪ್ರಕರಣದ ತನಿಖಾ ಮೇಲ್ವಿಚಾರಣೆಯನ್ನು ಸಿಬಿಐಗೆ ವಹಿಸಲಾಗಿತ್ತು.
 

Stay up to date on all the latest ರಾಷ್ಟ್ರೀಯ news
Poll
representation purpose only

ಕೋವಿಡ್ ಲಸಿಕೆ ವಿತರಿಸುವಲ್ಲಿ ಮೋದಿ ಸರ್ಕಾರ ಪಕ್ಷಪಾತ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನೀವು ಏನಂತೀರಿ?


Result
ಇಲ್ಲ, ಇದು ಅಸಂಬದ್ಧ ಆರೋಪ
ಹೌದು, ಪಕ್ಷಪಾತ ಮಾಡುತ್ತಿದೆ
flipboard facebook twitter whatsapp