ಹರಿಯಾಣದ ಅಂಬಾಲಾದಲ್ಲಿ ರಸ್ತೆ ಅಪಘಾತ: ಆರು ಮಂದಿ ಸಾವು

ಹರಿಯಾಣದ ಅಂಬಾಲಾ ಜಿಲ್ಲೆಯ ನಾರೈನ್‍ಘರ್‍-ಸಧೌರಾ ರಸ್ತೆಯಲ್ಲಿ ಶುಕ್ರವಾರ ಆಟೋ ರಿಕ್ಷಾ ಮತ್ತು ಕ್ಯಾಂಟರ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಸಹೋದರಿಯರಿಬ್ಬರು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Published: 18th December 2020 10:41 PM  |   Last Updated: 18th December 2020 10:41 PM   |  A+A-


Accident

ಸಾಂದರ್ಭಿಕ ಚಿತ್ರ

Posted By : Lingaraj Badiger
Source : UNI

ಅಂಬಾಲಾ: ಹರಿಯಾಣದ ಅಂಬಾಲಾ ಜಿಲ್ಲೆಯ ನಾರೈನ್‍ಘರ್‍-ಸಧೌರಾ ರಸ್ತೆಯಲ್ಲಿ ಶುಕ್ರವಾರ ಆಟೋ ರಿಕ್ಷಾ ಮತ್ತು ಕ್ಯಾಂಟರ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಸಹೋದರಿಯರಿಬ್ಬರು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬರ್ಸು ಮಜ್ರಾ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.

ಮೃತರನ್ನು ಸುನಿಲ್, ಮೆಹರ್ ಚಂದ್, ಸಲಾಂಟಿ, ಗಫಾರ್ದೀನ್, ಪ್ರಿಯಾಂಕಾ ಮತ್ತು ಕೋಮಲ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆ ನಂತರ ಮೃತದೇಹಗಳನ್ನು ಸಂಬಂಧಿತ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ. ಕ್ಯಾಂಟರ್ ಚಾಲಕನನ್ನು ಬೆನ್ನಟ್ಟಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Mamata1

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಟಿಎಂಸಿ ಪಕ್ಷಕ್ಕೆ ಗೆಲುವು: ಮಮತಾ ಬ್ಯಾನರ್ಜಿ ಈಗ ಭಾರತದ ಪ್ರಬಲ ಪ್ರತಿಪಕ್ಷ ನಾಯಕಿಯೇ?


Result
ಹೌದು, ನಿರ್ವಿವಾದವಾಗಿ.
ಇಲ್ಲ, ಪ್ರಾದೇಶಿಕ ನಾಯಕಿ ಅಷ್ಟೇ.
flipboard facebook twitter whatsapp