ದೆಹಲಿ ಸಿಎಂ ಮನೆ ಮುಂದೆ ಬಿಜೆಪಿ ಉಪವಾಸ: ಮಾಜಿ ಮೇಯರ್ ಸೇರಿ ಮೂವರು ಆಸ್ಪತ್ರೆಗೆ ದಾಖಲು

ಬಿಜೆಪಿ ಆಡಳಿತವಿರುವ ಮಹಾನಗರ ಪಾಲಿಕೆಗಳಿಗೆ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕೇಸರಿ ಪಕ್ಷ ದೆಹಲಿ ಮುಖ್ಯಮಂತ್ರಿ ಮನೆ ಮುಂದೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಶುಕ್ರವಾರ ಅಸ್ವಸ್ಥಗೊಂಡಿದ್ದ ದಕ್ಷಿಣ ದೆಹಲಿಯ ಮಾಜಿ ಮೇಯರ್ ಸುನೀತಾ ಹಾಗೂ ಇತರೆ ಇಬ್ಬರು ಕೌನ್ಸಿಲರ್‌ಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್

ನವದೆಹಲಿ: ಬಿಜೆಪಿ ಆಡಳಿತವಿರುವ ಮಹಾನಗರ ಪಾಲಿಕೆಗಳಿಗೆ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕೇಸರಿ ಪಕ್ಷ ದೆಹಲಿ ಮುಖ್ಯಮಂತ್ರಿ ಮನೆ ಮುಂದೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಶುಕ್ರವಾರ ಅಸ್ವಸ್ಥಗೊಂಡಿದ್ದ ದಕ್ಷಿಣ ದೆಹಲಿಯ ಮಾಜಿ ಮೇಯರ್ ಸುನೀತಾ ಹಾಗೂ ಇತರೆ ಇಬ್ಬರು ಕೌನ್ಸಿಲರ್‌ಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮುಂದೆ ಮಹಾನಗರ ಪಾಲಿಕೆ ಬಿಜೆಪಿ ಮುಖಂಡರು ನಡೆಸುತ್ತಿರುವ ಧರಣಿ ಇಂದು ಹನ್ನೆರಡನೇ ದಿನಕ್ಕೆ ಕಾಲಿಟ್ಟಿದೆ.

ಮೂರು ಮಹಾನಗರ ಪಾಲಿಕೆಗಳ ಮೇಯರ್‌ಗಳು ಮತ್ತು ಕೆಲವು ಹಿರಿಯ ಮುಖಂಡರು ಗುರುವಾರದಿಂದ ಸ್ಥಳದಲ್ಲಿ ಅನಿರ್ದಿಷ್ಟವಾಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಇಂದು ಮಾಜಿ ಮೇಯರ್ ಸೇರಿದಂತೆ ಮೂವರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಉಪವಾಸದಿಂದಾಗಿ ಮೂವರು ಕೌನ್ಸಿಲರ್‌ಗಳ ಆರೋಗ್ಯ ಹದಗೆಟ್ಟಿದ್ದು, ಅವರನ್ನು ಹಿಂದೂ ರಾವ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಂದು ಉತ್ತರ ದೆಹಲಿ ಮೇಯರ್ ಜೈ ಪ್ರಕಾಶ್ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com