ಉತ್ತರಾಖಂಡ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಗೆ ಕೊರೋನಾ ಪಾಸಿಟಿವ್!

ಈ ಹಿಂದೆ ಕೋವಿಡ್ 19 ಸಾಂಕ್ರಾಮಿಕದ ನಡುವೆಯೂ ಅಗತ್ಯ ಮುಂಜಾಗ್ರತೆ ವಹಿಸಿ ಕುಂಭಮೇಳ ನಡೆಸುತ್ತೇವೆ ಎಂದು ಹೇಳಿದ್ದ ಉತ್ತರಾಖಂಡ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಅವರಿಗೆ ಕೊರೋನಾ ಸೋಂಕು ಒಕ್ಕರಿಸಿದೆ.
ಉತ್ತರಾಖಂಡ್ ರಾಜ್ಯ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್
ಉತ್ತರಾಖಂಡ್ ರಾಜ್ಯ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್

ಡೆಹರಾಡೂನ್: ಈ ಹಿಂದೆ ಕೋವಿಡ್ 19 ಸಾಂಕ್ರಾಮಿಕದ ನಡುವೆಯೂ ಅಗತ್ಯ ಮುಂಜಾಗ್ರತೆ ವಹಿಸಿ ಕುಂಭಮೇಳ ನಡೆಸುತ್ತೇವೆ ಎಂದು ಹೇಳಿದ್ದ ಉತ್ತರಾಖಂಡ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಅವರಿಗೆ ಕೊರೋನಾ ಸೋಂಕು ಒಕ್ಕರಿಸಿದೆ.

ಈ ಬಗ್ಗೆ ಸ್ವತಃ ತ್ರಿವೇಂದ್ರ ಸಿಂಗ್ ರಾವತ್ ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದು, ನನ್ನ ಕೋವಿಡ್-19 ಟೆಸ್ಟ್ ವರದಿ ಪಾಸಿಟಿವ್ ಬಂದಿದ್ದು, ಕಳೆದ 10 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. ಅಲ್ಲದೆ ಪ್ರಸ್ತುತ ನನ್ನ ಆರೋಗ್ಯ  ಉತ್ತಮವಾಗಿದ್ದು, ನನಗೆ ಯಾವುದೇ ಲಕ್ಷಣಗಳಿಲ್ಲ. ಅದಾಗ್ಯೂ ವೈದ್ಯರ ಸಲಹೆ ಮೇರೆಗೆ ಹೋಮ್ ಐಸೋಲೇಷನ್ ನಲ್ಲಿದ್ದೇನೆ ಎಂದು  ಹೇಳಿದ್ದಾರೆ.

ಈ ಹಿಂದೆ ಇದೇ ತ್ರಿವೇಂದ್ರ ಸಿಂಗ್ ಕೋವಿಡ್-19 ಸಾಂಕ್ರಾಮಿಕದ ನಡುವೆಯೂ ಕುಂಭಮೇಳ ನಡೆಸುವುದಾಗಿ ಹೇಳಿದ್ದರು. ಅಖಿಲ ಭಾರತೀಯ ಅಖಡಾ ಪರಿಷತ್ ನ(ಎಬಿಎಪಿ)  ಸಭೆಯಲ್ಲಿ ಭಾಗವಹಿಸಿದ ನಂತರ ರಾವತ್ ಈ ನಿರ್ಧಾರ ಘೋಷಣೆ ಮಾಡಿದ್ದರು.  

2021ರ ಜನವರಿ 14ರಿಂದ ಕುಂಭಮೇಳ ಆರಂಭವಾಗಲಿದೆ.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com