ಕೇಂದ್ರ ಕೃಷಿ ಸಚಿವ ತೋಮರ್ ಪ್ರತಿಭಟನಾನಿರತ ರೈತರನ್ನು ಭೇಟಿ ಮಾಡುತ್ತಾರೆ: ಅಮಿತ್ ಶಾ

ಮೂರು ಹೊಸ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಕಳೆದ ನಾಲ್ಕು ವಾರಗಳಿಂದ ರಾಷ್ಟ್ರ ರಾಜಧಾನಿ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು...
ರೈತರ ಪ್ರತಿಭಟನೆ
ರೈತರ ಪ್ರತಿಭಟನೆ

ಬೋಲ್ಪುರ್: ಮೂರು ಹೊಸ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಕಳೆದ ನಾಲ್ಕು ವಾರಗಳಿಂದ ರಾಷ್ಟ್ರ ರಾಜಧಾನಿ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ನಾಳೆ ಅಥವಾ ನಾಡಿದ್ದು ಭೇಟಿಯಾಗಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಹೇಳಿದ್ದಾರೆ.

ಕೇಂದ್ರ ಸರ್ಕಾರ ಈಗಾಗಲೇ ರೈತ ಮುಖಂಡರೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದೆ. ಆದರೆ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಈಗ ತೋಮರ್ ಅವರು ರೈತರೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ.

ತೋಮರ್ ಅವರು ರೈತರನ್ನು ಯಾವಾಗ ಭೇಟಿ ಮಾಡುತ್ತಾರೆ ಎಂಬುದರ ಬಗ್ಗೆ ನನಗೆ ನಿಖರವಾಗಿ ತಿಳಿದಿಲ್ಲ ಆದರೆ ಅವರು ನಾಳೆ ಅಥವಾ ನಾಡಿದ್ದು, ರೈತ ಮುಖಂಡರನ್ನು ಭೇಟಿ ಮಾಡಿ, ಅವರ ಬೇಡಿಕೆಗಳ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ ಎಂದು ಅಮಿ ಶಾ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಸಿದ್ದಾರೆ.

ನರೇಂದ್ರ ಮೋದಿ ಸರ್ಕಾರ ಇತ್ತೀಚಿಗೆ ಜಾರಿಗೆ ತಂದ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಸಾವಿರಾರು ರೈತರು ದೆಹಲಿಯ ಗಡಿಗಳಲ್ಲಿ ಸುಮಾರು ಒಂದು ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com