ಕೃಷಿ ಕಾಯ್ದೆ ವಿರೋಧಿಸಿ ರೈತರಿಂದ ಡಿ.21ರಂದು ಉಪವಾಸ ಸತ್ಯಾಗ್ರಹ: ಟೋಲ್ ಸಂಗ್ರಹಕ್ಕೆ ಅಡ್ಡಿಪಡಿಸುವ ಬೆದರಿಕೆ!

ಕೇಂದ್ರದ ಹೊಸ ಕೃಷಿ ಕಾಯ್ದೆಗಳ ವಿರುದ್ಧ ತಮ್ಮ ಆಂದೋಲನವನ್ನು ತೀವ್ರಗೊಳಿಸಿರುವ ರೈತರು ಡಿ.21ರಂದು ಪ್ರತಿಭಟನಾ ಸ್ಥಳಗಳಲ್ಲಿ ದಿನವಿಡಿ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದು ಹರಿಯಾಣದ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹವನ್ನು ಡಿಸೆಂಬರ್ 25ರಿಂದ 27ರವರೆಗೆ ನಿಲ್ಲಿಸುವುದಾಗಿ ಘೋಷಿಸಿದ್ದಾರೆ.
ರೈತರ ಪ್ರತಿಭಟನೆ
ರೈತರ ಪ್ರತಿಭಟನೆ

ನವದೆಹಲಿ: ಕೇಂದ್ರದ ಹೊಸ ಕೃಷಿ ಕಾಯ್ದೆಗಳ ವಿರುದ್ಧ ತಮ್ಮ ಆಂದೋಲನವನ್ನು ತೀವ್ರಗೊಳಿಸಿರುವ ರೈತರು ಡಿ.21ರಂದು ಪ್ರತಿಭಟನಾ ಸ್ಥಳಗಳಲ್ಲಿ ದಿನವಿಡಿ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದು ಹರಿಯಾಣದ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹವನ್ನು ಡಿಸೆಂಬರ್ 25ರಿಂದ 27ರವರೆಗೆ ನಿಲ್ಲಿಸುವುದಾಗಿ ಘೋಷಿಸಿದ್ದಾರೆ.

ಕಳೆದ ನಾಲ್ಕು ವಾರಗಳಿಂದ ದೆಹಲಿಯ ವಿವಿಧ ಗಡಿ ಕೇಂದ್ರಗಳಲ್ಲಿ ಕಾಯ್ದೆ ವಿರೋಧಿಸಿ ಮುಖ್ಯವಾಗಿ ಪಂಜಾಬ್ ಮತ್ತು ಹರಿಯಾಣದ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಜೊತೆಗೆ ಕಾಯ್ದೆಗಳನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.

ನೂತನ ಕೃಷಿ ಕಾಯ್ದೆಘಲ ವಿರುದ್ಧ ಪ್ರತಿಭಟನೆ ನಡೆಯುತ್ತಿರುವ ಎಲ್ಲಾ ಸ್ಥಳಗಳಲ್ಲಿ ರೈತರು ಸೋಮವಾರ ದಿನವಿಡೀ ಉಪವಾಸ ಸತ್ಯಾಗ್ರಹ ಮಾಡಲಿದ್ದಾರೆ. 

ಸಿಂಗು ಗಡಿ ಸೇರಿದಂತೆ ಪ್ರತಿಭಟನಾ ಸ್ಥಳಗಳಲ್ಲಿ 11 ಸದಸ್ಯರ ತಂಡ ಉಪವಾಸ ಸತ್ಯಾಗ್ರಹವನ್ನು ಮಾಡಲಿದ್ದಾರೆ ಎಂದು ಸ್ವರಾಜ್ ಇಂಡಿಯಾ ಮುಖ್ಯಸ್ಥ ಯೋಗೇಂದ್ರ ಯಾದವ್ ಹೇಳಿದ್ದಾರೆ. " ರಾಷ್ಟ್ರದಾದ್ಯಂತದ ಎಲ್ಲಾ ಪ್ರತಿಭಟನಾ ಸ್ಥಳಗಳಲ್ಲಿ ಎಲ್ಲರೂ ಒಂದೇ ರೀತಿ ಭಾಗವಹಿಸುವಂತೆ ನಾವು ಮನವಿ ಮಾಡುತ್ತೇವೆ ಎಂದರು. 

ಹರಿಯಾಣ ಸರ್ಕಾರದಿಂದ ಪ್ರತಿಭಟನಾಕಾರರಿಗೆ ಬೆದರಿಕೆ ಇದೆ. ಇದು ಸುಪ್ರೀಂ ಕೋರ್ಟ್‌ನ ನಿರ್ದೇಶನಕ್ಕೆ ವಿರುದ್ಧವಾಗಿದೆ. ನಾಳೆಯಿಂದ ರೈತರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸುವಂತೆ ನಾನು ಅವರನ್ನು ಒತ್ತಾಯಿಸುತ್ತೇನೆ ಎಂದು ದೆಹಲಿ-ಹರಿಯಾಣ ಸಿಂಗ್ ಗಡಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ರೈತರ ತಮ್ಮ ಆಂದೋಲನವನ್ನು ಯಾವುದೇ ಅಡೆತಡೆಯಿಲ್ಲದೆ ಮುಂದುವರಿಸಲು ಅವಕಾಶ ನೀಡಬೇಕು. ಜೊತೆಗೆ ಪ್ರತಿಭಟಿಸುವ ಹಕ್ಕನ್ನು ಮೂಲಭೂತ ಹಕ್ಕಾಗಿರುವುದರಿಂದ 'ಹಸ್ತಕ್ಷೇಪ ಮಾಡುವುದಿಲ್ಲ' ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com