ಪ್ರತಿಭಟನಾ ಸ್ಥಳದಿಂದ ಮನೆಗೆ ಬಂದು ಆತ್ಮಹತ್ಯೆಗೆ ಶರಣಾದ ಪಂಜಾಬ್ ರೈತ

ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರೊಬ್ಬರು ಮನೆಗೆ ಬಂದು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚಂಡೀಗಢ: ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರೊಬ್ಬರು ಮನೆಗೆ ಬಂದು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ.

ಪ್ರತಿಭಟನಾ ಸ್ಥಳದಿಂದ ಮನೆಗೆ ಬಂದಿದ್ದ 22 ವರ್ಷದ ಪಂಜಾಬ್ ರೈತ, ಕೆಲವು ವಿಷಕಾರಿ ವಸ್ತುಗಳನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡಿರುವ ರೈತ ಬತಿಂಡಾ ಜಿಲ್ಲೆಯ ದಯಾಲ್‌ಪುರ ಮಿರ್ಜಾ ಗ್ರಾಮದ ನಿವಾಸಿ ಗುಲಾಭ್ ಸಿಂಗ್ ಎಂದು ಗುರುತಿಸಲಾಗಿದ್ದು, ದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಭಾಗವಾಗಿದ್ದರು.

ಕಳೆದ ಶುಕ್ರವಾರ ತಮ್ಮ ಗ್ರಾಮಕ್ಕೆ ಮರಳಿದ್ದ ರೈತ, ಶನಿವಾರ ತಮ್ಮ ಮನೆಯಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರೈತನ ಆತ್ಮಹತ್ಯೆಯ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿ ತಿಳಿದುಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com