ಅಮಾನವೀಯ ಘಟನೆ: ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಹತ್ಯೆ

ನೆರೆಮನೆಯಲ್ಲಿದ್ದ ಕಾಮುಕ ವ್ಯಕ್ತಿಯೊಬ್ಬ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಹರಿಯಾಣದ ಜಜ್ಜರ್ ನಗರದಲ್ಲಿ ನಡೆದಿರುವುದಾಗಿ ಸೋಮವಾರ ಪೊಲೀಸರು ಹೇಳಿದ್ದಾರೆ.

Published: 21st December 2020 05:51 PM  |   Last Updated: 21st December 2020 07:46 PM   |  A+A-


Police1

ಪೊಲೀಸ್

Posted By : Nagaraja AB
Source : Online Desk

ಚಂಢೀಗಢ: ನೆರೆಮನೆಯಲ್ಲಿದ್ದ ಕಾಮುಕ ವ್ಯಕ್ತಿಯೊಬ್ಬ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಹರಿಯಾಣದ ಜಜ್ಜರ್ ನಗರದಲ್ಲಿ ನಡೆದಿರುವುದಾಗಿ ಸೋಮವಾರ ಪೊಲೀಸರು ಹೇಳಿದ್ದಾರೆ.

ರಾತ್ರಿ ವೇಳೆಯಲ್ಲಿ ಬಾಲಕಿಯನ್ನು ಅಪಹರಿಸಿದ ಕ್ರಿಮಿನಲ್ ಹಿನ್ನೆಲೆಯ 30 ವರ್ಷದ ಕಿರಾತಕ, ತನ್ನ ಮನೆಯಲ್ಲಿ ಅತ್ಯಾಚಾರವೆಸಗಿ, ನಂತರ ಆಕೆಯನ್ನು ಹತ್ಯೆ ಮಾಡಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು, ಆತನ ಮನೆಯಿಂದ ಮೃತದೇಹವನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸರು ಹೇಳಿದ್ದಾರೆ.

ಆತನ ವಿರುದ್ಧ ಕಾನೂನಿಗೆ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಾಲಕಿಯ ತಂದೆ ವಲಸೆ ಕಾರ್ಮಿಕರಾಗಿದ್ದು, ಮಧ್ಯಪ್ರದೇಶಕ್ಕೆ ಸೇರಿದವರಾಗಿದ್ದಾರೆ. ಆರೋಪಿ ಜಜ್ಜರ್ ಮೂಲದವರು ಎಂದು ಅವರು ಮಾಹಿತಿ ನೀಡಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Coronil tablets

ಕೋವಿಡ್-19 ವಿರುದ್ಧಪತಂಜಲಿಯ ಕೊರೋನಿಲ್ ಮಾತ್ರೆಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ನೀವು ಭಾವಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp