ಜನವರಿಯಿಂದಲೇ ಭಾರತದಲ್ಲಿ ಕೊರೋನಾ ಲಸಿಕೆ ನೀಡಲು ಪ್ರಾರಂಭಿಸಬಹುದು: ಸಚಿವ ಹರ್ಷವರ್ಧನ್

ಭಾರತದಲ್ಲಿ ಜನವರಿಯಿಂದ ದೇಶದ ಜನತೆಗೆ ಲಸಿಕೆ ನೀಡಲು ಪ್ರಾರಂಭಿಸಬಹುದು. ಕೇಂದ್ರ ಸರ್ಕಾರದ ಮೊದಲ ಆದ್ಯತೆ ಲಸಿಕೆಯ ಸುರಕ್ಷತೆ ಮತ್ತು ಪರಿಣಾಮಕಾರಿತ್ವ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಭಾರತದಲ್ಲಿ ಜನವರಿಯಿಂದ ದೇಶದ ಜನತೆಗೆ ಲಸಿಕೆ ನೀಡಲು ಪ್ರಾರಂಭಿಸಬಹುದು. ಕೇಂದ್ರ ಸರ್ಕಾರದ ಮೊದಲ ಆದ್ಯತೆ ಲಸಿಕೆಯ ಸುರಕ್ಷತೆ ಮತ್ತು ಪರಿಣಾಮಕಾರಿತ್ವ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.

ನಾನು ವೈಯಕ್ತಿಕವಾಗಿ ಜನವರಿಯಿಂದ ಯಾವುದೇ ಹಂತದಲ್ಲಿ ಅಥವಾ ಯಾವುದೇ ವಾರದಿಂದಾಗಲಿ ದೇಶದ ಜನರಿಗೆ ಕೊರೋನಾ ಲಸಿಕೆ ಶಾಟ್ ನೀಡಬಹುದು ಎಂದು ಹರ್ಷ್ ವರ್ಧನ್ ಎಎನ್‌ಐಗೆ ವಿಶೇಷ ಸಂದರ್ಶನದಲ್ಲಿ ತಿಳಿಸಿದರು.

ಕೊರೋನಾವೈರಸ್ ವಿರುದ್ಧ ಭಾರತದಲ್ಲಿ ವ್ಯಾಕ್ಸಿನೇಷನ್ ಚಾಲನೆಯ ಬಗ್ಗೆ ಕೇಳಿದಾಗ, ತುರ್ತು ಬಳಕೆಯ ದೃಢಿಕರಣಕ್ಕಾಗಿ ಅರ್ಜಿ ಸಲ್ಲಿಸಿದವರು ಸೇರಿದಂತೆ ಲಸಿಕೆಗಳನ್ನು ನಿಯಂತ್ರಕದಿಂದ ವಿಶ್ಲೇಷಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.

ಕೋವಿಡ್ 19 ಲಸಿಕೆ ಮತ್ತು ಸಂಶೋಧನೆಗೆ ಸಂಬಂಧಿಸಿದಂತೆ ಭಾರತವು ಯಾವುದೇ ದೇಶಕ್ಕಿಂತ ಕಡಿಮೆಯಿಲ್ಲ. ಲಸಿಕೆಯ ಸುರಕ್ಷತೆ ಮತ್ತು ಪರಿಣಾಮಕಾರಿತ್ವವೇ ನಮ್ಮ ಮೊದಲ ಆದ್ಯತೆ. ಅದರಲ್ಲಿ ಯಾವುದೆಲ್ಲ ಒಳಗೊಂಡಿರಬೇಕೆಂದು ನಾವು ಬಯಸುವುದಿಲ್ಲ. ನಮ್ಮ ನಿಯಂತ್ರಕರು ಅವುಗಳನ್ನು ಗಂಭೀರತೆಯಿಂದ ವಿಶ್ಲೇಷಿಸುತ್ತಿದ್ದಾರೆ ಎಂದರು. 

ದೇಶದ ಲಸಿಕೆ ಅಭಿವೃದ್ಧಿಪಡಿಸುವಲ್ಲಿ ದೇಶದ ವಿಜ್ಞಾನಿಗಳು ಮತ್ತು ಆರೋಗ್ಯ ತಜ್ಞರು ಕೆಲಸ ಮಾಡಿದ್ದಾರೆ ಮತ್ತು ಮುಂಬರುವ ಆರರಿಂದ ಏಳು ತಿಂಗಳಲ್ಲಿ ಸುಮಾರು 30 ಕೋಟಿ ಜನರಿಗೆ ಚುಚ್ಚುಮದ್ದು ನೀಡುವ ಸಾಮರ್ಥ್ಯವನ್ನು ಭಾರತ ಹೊಂದಿದೆ ಎಂದು ಹರ್ಷವರ್ಧನ್ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com