ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ, ಎಐಎಡಿಎಂಕೆಯೊಂದಿಗೆ ಮೈತ್ರಿ ಇಲ್ಲ ಎಂದ ಕಮಲ್ ಹಾಸನ್ 

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಎಐಎಡಿಎಂಕೆ ಅಥವಾ ಡಿಎಂಕೆಯೊಂದಿಗೆ ತಮ್ಮ ಪಕ್ಷ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮಕ್ಕಳ್ ನಿಧಿ ಮೈಮ್ (ಎಂಎನ್ ಎಂ) ಮುಖ್ಯಸ್ಥ ಕಮಲ್ ಹಾಸನ್ ಸೋಮವಾರ ಸ್ಪಷ್ಟಪಡಿಸಿದ್ದಾರೆ.

Published: 21st December 2020 12:18 PM  |   Last Updated: 21st December 2020 12:54 PM   |  A+A-


Kamal_Hasan1

ಕಮಲ್ ಹಾಸನ್

Posted By : Nagaraja AB
Source : ANI

ಚೆನ್ನೈ: ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಎಐಎಡಿಎಂಕೆ ಅಥವಾ ಡಿಎಂಕೆಯೊಂದಿಗೆ ತಮ್ಮ ಪಕ್ಷ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮಕ್ಕಳ್ ನಿಧಿ ಮೈಮ್ (ಎಂಎನ್ ಎಂ) ಮುಖ್ಯಸ್ಥ ಕಮಲ್ ಹಾಸನ್ ಸೋಮವಾರ ಸ್ಪಷ್ಟಪಡಿಸಿದ್ದಾರೆ.

ಕಾಂಚಿಪುರಂನಲ್ಲಿಂದು ಸುದ್ದಿಗೋಷ್ಛಿಯಲ್ಲಿ ಮಾತನಾಡಿದ ಅವರು, ತಮ್ಮ ಪಕ್ಷ ಆರ್ಥಿಕ ಕ್ರಾಂತಿಯ ಕಡೆಗೆ ಗಮನ ಹರಿಸಬೇಕಾಗಿದೆ ಎಂದರು.

ಅಣ್ಣಾ ಜನ್ಮ ಸ್ಥಳದಿಂದ ಎರಡನೇ ಹಂತದ ಪ್ರಚಾರವನ್ನು ಆರಂಭಿಸಲಾಗುವುದು, ಭ್ರಷ್ಟಾಚಾರ ಮತ್ತು ಒತ್ತಡದಿಂದಾಗಿ ಐಎಎಸ್ ಅಧಿಕಾರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಂತೋಷ್ ಬಾಬು ತಮ್ಮ ಪಕ್ಷವನ್ನು ಸೇರಿಕೊಂಡಿದ್ದು, ವಿಧಾನಸಭಾ ಚುನಾವಣೆ ನಂತರ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಜನರ ಕಲ್ಯಾಣದ ನಿಟ್ಟಿನಲ್ಲಿ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದರು.

ಸೇವೆಗಳನ್ನು ಜನರ ಬಾಗಿಲಿಗೆ ಕೊಂಡೊಯ್ಯಲಾಗುವುದು, ಎಲ್ಲಾ ಮನೆಗಳನ್ನೂ ಡಿಜಿಟಲೀಕರಣಗೊಳಿಸಲಾಗುವುದು, ನಗರ ಪ್ರದೇಶದಲ್ಲಿನ ಮೂಲಸೌಕರ್ಯಗಳನ್ನು ಹಳ್ಳಿಗಳಿಗೂ ಕಲ್ಪಿಸಲಾಗುವುದು, ಇದರಿಂದಾಗಿ ವಲಸೆ ಸಮಸ್ಯೆ ತಪ್ಪಲಿದೆ. ಸಣ್ಣ ಕೈಗಾರಿಕೆಗಳ ಅಭಿವೃದ್ಧಿಯ ನಿಟ್ಟಿನಲ್ಲಿ ಗಮನ ಹರಿಸಲಾಗುವುದು ಎಂದು ಹೇಳಿದರು.

ಅಂತರ್ಜಾಲವನ್ನು ಮಾನವ ಮೂಲಭೂತ ಹಕ್ಕಾಗಿ ಘೋಷಿಸಲಾಗುವುದು, ಉಚಿತವಾಗಿ ಎಲ್ಲಾ ಮನೆಗಳಿಗೂ 200 ಎಂಬಿಪಿಎಸ್ ಇಂಟರ್ ನೆಟ್ ಸೌಕರ್ಯವನ್ನು ಒದಗಿಸಲಾಗುವುದು ಎಂದು ಕಮಲ್ ಹಾಸನ್ ತಿಳಿಸಿದರು.

Stay up to date on all the latest ರಾಷ್ಟ್ರೀಯ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp