ಜಾರ್ಖಂಡ್: ಮೋಸ್ಟ್ ವಾಂಟೆಡ್ ಮಾವೋವಾದಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪೊಲೀಸರು

ಖುಂಟಿಯ ಮುರ್ಹು ಪೊಲೀಸ್ ಠಾಣೆ ವ್ಯಾಪ್ತಿಯ ಕೊಯೆಂಗ್‌ಸರ್‌ನಲ್ಲಿ ಸೋಮವಾರ ನಡೆದ ಎನ್‌ಕೌಂಟರ್ ನಲ್ಲಿ ಮೋಸ್ಟ್ ವಾಂಟೆಡ್ ಮಾವೋವಾದಿ ಪಿಎಲ್‌ಎಫ್‌ಐನ ಜೀದಾನ್ ಗುರಿಯಾನನ್ನು ಹತ್ಯೆ ಮಾಡಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ರಾಂಚಿ: ಖುಂಟಿಯ ಮುರ್ಹು ಪೊಲೀಸ್ ಠಾಣೆ ವ್ಯಾಪ್ತಿಯ ಕೊಯೆಂಗ್‌ಸರ್‌ನಲ್ಲಿ ಸೋಮವಾರ ನಡೆದ ಎನ್‌ಕೌಂಟರ್ ನಲ್ಲಿ ಮೋಸ್ಟ್ ವಾಂಟೆಡ್ ಮಾವೋವಾದಿ ಪಿಎಲ್‌ಎಫ್‌ಐನ ಜೀದಾನ್ ಗುರಿಯಾನನ್ನು ಹತ್ಯೆ ಮಾಡಲಾಗಿದೆ. ಈ ಮಾವೋವಾದಿಯ ಹತ್ಯೆಗೆ 15 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು.

ಸಂಘಟನೆಯಲ್ಲಿ ಪಿಎಲ್ಎಫ್ಐ ಮುಖ್ಯಸ್ಥ ದಿನೇಶ್ ಗೋಪ್ ನಂತರ ಗುರಿಯಾ ಎರಡನೇ ಸ್ಥಾನದಲ್ಲಿದ್ದರು ಮತ್ತು ಈ ಪ್ರದೇಶದ ವಿವಿಧ ಪೊಲೀಸ್ ಠಾಣೆಗಳಲ್ಲಿ ಗುರಿಯಾ ವಿರುದ್ಧ ಕೊಲೆ, ಲೂಟಿ ಸೇರಿದಂತೆ 100ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ.

ಒಂದು ಎಕೆ -47 ರೈಫಲ್, ಹಲವಾರು ಲೈವ್ ಕಾರ್ಟ್ರಿಜ್ ಗಳು ಮತ್ತು ದಿನನಿತ್ಯದ ಬಳಕೆಯ ಇತರ ಲೇಖನಗಳನ್ನು ಸಹ ಎನ್ ಕೌಂಟರ್ ನಡೆದ ಸ್ಥಳದಲ್ಲಿ ವಶಪಡಿಸಿಕೊಳ್ಳಲಾಗಿದೆ.

"ಶೋಧ ಕಾರ್ಯಾಚರಣೆಯ ಸಮಯದಲ್ಲಿ, ಭದ್ರತಾ ಪಡೆಗಳು ಸ್ಥಳಕ್ಕೆ ತಲುಪಿದ ತಕ್ಷಣ, ಪಿಎಲ್ಎಫ್ಐ ಕಾರ್ಯಕರ್ತರು ಪೊಲೀಸರ ಮೇಲೆ ಗುಂಡು ಹಾರಿಸಲಾರಂಭಿಸಿದರು. ಪ್ರತಿದಾಳಿ ನಡೆಸಿದ ಪೊಲೀಸರು ಗುರಿಯಾನನ್ನು ಹತ್ಯೆ ಮಾಡುವ ಮೂಲಕ ಪ್ರತೀಕಾರ ತೀರಿಸಿಕೊಂಡರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com