ಪಶ್ಚಿಮ ಬಂಗಾಳದಲ್ಲಿ ಪಕ್ಷಾಂತರ ಪರ್ವ: ಬಿಜೆಪಿ ಸಂಸದ ಸೌಮಿತ್ರಾ ಖಾನ್ ಪತ್ನಿ ಟಿಎಂಸಿಗೆ ಸೇರ್ಪಡೆ!

ವಿಧಾನಸಭೆ ಚುನಾವಣೆ ಸಮೀಪದಲ್ಲಿರುವಂತೆ ಪಶ್ಚಿಮ ಬಂಗಾಳದಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದೆ. ಒಂದು ಕಡೆ ಆಡಳಿತಾರೂಢ ಟಿಎಂಸಿಯ ಶಾಸಕರು ಬಿಜೆಪಿಯತ್ತ ಜಿಗಿಯುತ್ತಿದ್ದರೆ ಮತ್ತೊಂದೆಡೆ ಬಿಜೆಪಿ ಮುಖಂಡರು ಸಹ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಾಯಕತ್ವ ಒಪ್ಪಿ, ಟಿಎಂಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ.
ಬಿಜೆಪಿ ಸಂಸದ ಸೌಮಿತ್ರಾ ಖಾನ್ ಪತ್ನಿ ಸುಜಾತ ಮೊಂಡಾಲ್ ಖಾನ್
ಬಿಜೆಪಿ ಸಂಸದ ಸೌಮಿತ್ರಾ ಖಾನ್ ಪತ್ನಿ ಸುಜಾತ ಮೊಂಡಾಲ್ ಖಾನ್

ಕೊಲ್ಕತ್ತಾ: ವಿಧಾನಸಭೆ ಚುನಾವಣೆ ಸಮೀಪದಲ್ಲಿರುವಂತೆ ಪಶ್ಚಿಮ ಬಂಗಾಳದಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದೆ. ಒಂದು ಕಡೆ ಆಡಳಿತಾರೂಢ ಟಿಎಂಸಿಯ ಶಾಸಕರು ಬಿಜೆಪಿಯತ್ತ ಜಿಗಿಯುತ್ತಿದ್ದರೆ ಮತ್ತೊಂದೆಡೆ ಬಿಜೆಪಿ ಮುಖಂಡರು ಸಹ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಾಯಕತ್ವ ಒಪ್ಪಿ, ಟಿಎಂಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ.

ಬಿಜೆಪಿ ಸಂಸದ ಸೌಮಿತ್ರಾ ಖಾನ್ ಅವರ ಪತ್ನಿ ಸುಜಾತಾ ಮೊಂಡಾಲ್ ಖಾನ್ ಸೋಮವಾರ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಸೇರಿಕೊಂಡಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಅನೇಕ ಸವಾಲುಗಳನ್ನು ಎದುರಿಸಿ  ಪತಿಯನ್ನು ಗೆಲ್ಲಿಸಿಕೊಂಡರು ಸಹ ಪಕ್ಷ ಸರಿಯಾಗಿ ತಮ್ಮನ್ನು ಗುರುತಿಸಲಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ.

ಕೇಸರಿ ಪಕ್ಷದಲ್ಲಿ ನಿಷ್ಠಾವಂತರನ್ನು ಕಡೆಗಣಿಸಿ ಹೊಸದಾಗಿ ಸೇರಿಕೊಡ ಭ್ರಷ್ಟಾಚಾರ ಮುಖಂಡರಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತದೆ ಎಂದು ಅವರು ಆರೋಪಿಸಿದ್ದಾರೆ. 

ಟಿಎಂಸಿ ಸಂಸದ ಸೌಗತ ರಾಯ್ ಮತ್ತು ಅದರ ವಕ್ತಾರರಾದ ಕುನಾಲ್ ಘೋಷ್ ಸಮ್ಮುಖದಲ್ಲಿ ಟಿಎಂಸಿಗೆ ಸೇರ್ಪಡೆಯಾದ ಬಳಿಕ ಮಾತನಾಡಿದ ಸುಜಾತಾ ಮೊಂಡಾಲ್ ಖಾನ್, ಮತ್ತೆ ಬಿಜೆಪಿಗೆ ಹೋಗಲ್ಲ, ಮಮತಾ ಬ್ಯಾನರ್ಜಿ ಮತ್ತು ಅಭಿಷೇಕ್ ಬ್ಯಾನರ್ಜಿ ಅವರ ನಾಯಕತ್ವದಡಿಯಲ್ಲಿ ಕೆಲಸ ಮಾಡುವುದಾಗಿ ಹೇಳಿದರು. 

ಬಿಜೆಪಿ ಯುವ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷರಾಗಿರುವ ಸೌಮಿತ್ರಾ ಖಾನ್ ಕುರಿತು ಪ್ರತಿಕ್ರಿಯಿಸಿದ ಮೊಂಡಾಲ್ ಖಾನ್, ಒಂದಲ್ಲಾ ಒಂದು ದಿನ ಅವರಿಗೂ ಅರಿವಾಗಿ ಅವರು ಕೂಡಾ ಟಿಎಂಸಿಗೆ ಬರಬಹುದೆಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com