ಬಾರಾಮುಲ್ಲಾದಲ್ಲಿ ಅಡಗಿ ಕುಳಿತಿರುವ ಇಬ್ಬರು ಉಗ್ರರು: ಸೇನಾಪಡೆ ಕಾರ್ಯಾಚರಣೆ, ಓರ್ವ ಯೋಧನಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ವಾನಿಗಾಮ್ ಎಂಬಲ್ಲಿ ಉಗ್ರರು ಅಡಗಿ ಕುಳಿತಿದ್ದು, ಉಗ್ರರಿಗಾಗಿ ಭಾರತೀಯ ಸೇನಾಪಡೆ ಭಾರೀ ಕಾರ್ಯಾಚರಣೆ ನಡೆಯುತ್ತಿದೆ ಎಂದು ಗುರುವಾರ ತಿಳಿದುಬಂದಿದೆ.
Published: 24th December 2020 11:59 AM | Last Updated: 24th December 2020 12:31 PM | A+A A-

ಸಂಗ್ರಹ ಚಿತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ವಾನಿಗಾಮ್ ಎಂಬಲ್ಲಿ ಉಗ್ರರು ಅಡಗಿ ಕುಳಿತಿದ್ದು, ಉಗ್ರರಿಗಾಗಿ ಭಾರತೀಯ ಸೇನಾಪಡೆ ಭಾರೀ ಕಾರ್ಯಾಚರಣೆ ನಡೆಯುತ್ತಿದೆ ಎಂದು ಗುರುವಾರ ತಿಳಿದುಬಂದಿದೆ.
ಕಾರ್ಯಾಚರಣೆ ಆರಂಭವಾಗುತ್ತಿದ್ದಂತೆಯೇ ಉಗ್ರರು ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ. ಈ ವೇಳೆ ಯೋಧರು ಕಾರ್ಯಾಚರಣೆಯನ್ನು ಎನ್ಕೌಂಟರ್ ಆಗಿ ಮಾರ್ಪಡಿಸಿತ್ತು, ಸ್ಥಳದಲ್ಲಿ ಉಗ್ರರು ಹಾಗೂ ಸೇನಾಪಡೆಗಳ ನಡುವೆ ಭಾರೀ ಪ್ರಮಾಣದಲ್ಲಿ ಗುಂಡಿನ ಚಕಮಕಿ ನಡೆಯುತ್ತಿವೆ ಎಂದು ವರದಿಗಳು ತಿಳಿಸಿವೆ.
ಕಾರ್ಯಾಚರಣೆ ವೇಳೆ ಉಗ್ರರು ನಡೆಸಿದ ದಾಳಿಯಲ್ಲಿ ಓರ್ವ ಯೋಧ ಗಂಭೀರವಾಗಿ ಗಾಯಗೊಂಡಿದ್ದಾರೆಂದು ಹೇಳಲಾಗುತ್ತಿದೆ. ಇದೀಗ ಉಗ್ರರು ಅಡಗಿರುವ ಪ್ರದೇಶವನ್ನು ಭದ್ರತಾಪಡೆಗಳು ಸುತ್ತುವರೆದಿದ್ದು, ದಾಳಿಗೆ ದಿಟ್ಟ ಉತ್ತರವನ್ನು ನೀಡುತ್ತಿದ್ದಾರೆ.