ಹೊಸ ಕೃಷಿ ಕಾಯ್ದೆಗಳನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರೈತರ ಒಕ್ಕೂಟ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಈಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. 
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಈಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. 

ಭಾರತೀಯ ಕಿಸಾನ್ ಯೂನಿಯನ್ (ಲೋಕ್ ಶಕ್ತಿ) ಮೂರು ಕೃಷಿ ಕಾಯ್ದೆಗಳನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. 

ಸುಪ್ರೀಂ ಕೋರ್ಟ್ ನಲ್ಲಿ ಬಾಕಿ ಇರುವ ವಿಷಯವನ್ನು ಕೈಗೆತ್ತಿಕೊಳ್ಳಬೇಕೆಂದು ರೈತರ ಒಕ್ಕೂಟ ಮನವಿ ಮಾಡಿದೆ. ಹೊಸ ಕೃಷಿ ಕಾಯ್ದೆಗಳು ಕಾರ್ಪೊರೇಟ್ ಹಿತಾಸಕ್ತಿಯನ್ನು ಉತ್ತೇಜಿಸುತ್ತದೆಯೇ ಹೊರತು ರೈತರ ಹಿತಾಸಕ್ತಿಯ ಬಗ್ಗೆ ಗಮನ ಹರಿಸುವುದಿಲ್ಲ ಎಂದು ರೈತರು ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡಿಸಿದ್ದಾರೆ. 

ಎಪಿ ಸಿಂಗ್ ಮೂಲಕ ರೈತರು ಅರ್ಜಿ ಸಲ್ಲಿಸಿದ್ದು, ಕಾಯ್ದೆ, ಸಾಂವಿಧಾನಿಕ ವಿರೋಧಿಯಾಗಿದ್ದು, ಎಪಿಎಂಸಿ ವ್ಯವಸ್ಥೆಯನ್ನೇ ಕುಸಿಯುವಂತೆ ಮಾಡಲು ಉದ್ದೇಶಿಸಲಾಗಿದೆ ಎಂದು ಆರೋಪಿಸಿದ್ದಾರೆ. ಕೃಷಿ ಕಾಯ್ದೆಯನ್ನು ಈಗಿನ ಸ್ವರೂಪದಲ್ಲಿಯೇ ಜಾರಿಗೆ ತಂದಲ್ಲಿ ರೈತ ಸಮುದಾಯಕ್ಕೇ ಅಪಾಯಕಾರಿ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com