ಕಾಶ್ಮೀರ: ಬಾರಾಮುಲ್ಲಾದಲ್ಲಿ ಪಾಕ್‍ ನಿವಾಸಿ ಸೇರಿ ಇಬ್ಬರು ಉಗ್ರರ ಹತ್ಯೆ, ಮುಂದುವರೆದ ಕಾರ್ಯಾಚರಣೆ

ಉತ್ತರ ಕಾಶ್ಮೀರ ಜಿಲ್ಲೆಯಾದ ಬಾರಾಮುಲ್ಲಾದಲ್ಲಿ ಗುರುವಾರ ಭದ್ರತಾ ಪಡೆಗಳು ನಡೆಸಿದ ಶೋಧ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸ್‍ ವಕ್ತಾರರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶ್ರೀನಗರ: ಉತ್ತರ ಕಾಶ್ಮೀರ ಜಿಲ್ಲೆಯಾದ ಬಾರಾಮುಲ್ಲಾದಲ್ಲಿ ಗುರುವಾರ ಭದ್ರತಾ ಪಡೆಗಳು ನಡೆಸಿದ ಶೋಧ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸ್‍ ವಕ್ತಾರರು ತಿಳಿಸಿದ್ದಾರೆ.

ಉಗ್ರರ ಅಡಗಿರುವ ಖಚಿತ ಮಾಹಿತಿಯನ್ನಾಧರಿಸಿ, ರಾಷ್ಟ್ರೀಯ ರೈಫಲ್ಸ್, ಜಮ್ಮು ಮತ್ತು ಕಾಶ್ಮೀರದ ವಿಶೇಷ ಕಾರ್ಯಾಚರಣೆ ತಂಡ(ಎಸ್‌ಒಜಿ) ಮತ್ತು ಸಿಆರ್‌ಪಿಎಫ್ ಜಂಟಿಯಾಗಿ ಇಂದು ಬೆಳಗ್ಗೆ ಬಾರಾಮುಲ್ಲಾದ ವನಿಗಮ್ ಪಯೀನ್ ಕ್ರೆರಿಯಲ್ಲಿ ಕಾರ್ಯಾಚರಣೆ ಆರಂಭಿಸಿದ್ದವು ಎಂದು ಅವರು ಹೇಳಿದ್ದಾರೆ.

ಎಲ್ಲಾ ನಿರ್ಗಮನ ಕೇಂದ್ರಗಳನ್ನು ಮುಚ್ಚಿದ ನಂತರ, ಭದ್ರತಾ ಪಡೆಗಳು ಮನೆ-ಮನೆಗೆ ತೆರಳಿ ಶೋಧ ನಡೆಸಿದ್ದಾರೆ. ಈ ವೇಳೆ ಮನೆಯೊಂದರಲ್ಲಿ ಅಡಗಿದ್ದ ಉಗ್ರರು ಗುಂಡಿನ ದಾಳಿ ನಡೆಸಿದಾಗ ಪರಸ್ಪರ ಗುಂಡಿನ ಚಕಮಕಿ ನಡೆದಿದೆ. ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದು, ಇತ್ತೀಚಿನ ವರದಿ ಬಂದಾಗ ಕಾರ್ಯಾಚರಣೆ ಮುಂದುವರೆದಿತ್ತು ಎಂದು ಅವರು ಹೇಳಿದ್ದಾರೆ.

ಈ ಮಧ್ಯೆ, ಸುತ್ತುವರಿದ ಪ್ರದೇಶದ ಹೊರಗೆ ಯಾವುದೇ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಹೆಚ್ಚುವರಿ ಭದ್ರತಾ ಪಡೆಗಳು ಮತ್ತು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com