ಜಾರ್ಖಂಡ್ ಸಿಎಂ ಅತ್ಯಾಚಾರ ಪ್ರಕರಣಕ್ಕೆ ಹೊಸ ತಿರುವು: ತನ್ನ ಜೀವಕ್ಕೆ ಅಪಾಯ ಇದೆ ಎಂದ ಸಂತ್ರಸ್ತೆ

ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ವಿರುದ್ಧದ ಅತ್ಯಾಚಾರ ಮತ್ತು ಅಪಹರಣಕ್ಕೆ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದ್ದು, ತನ್ನ ಜೀವಕ್ಕೆ ಅಪಾಯ ಇದೆ ಎಂದು ಸಂತ್ರಸ್ತೆ ಯುವತಿ, ಮುಂಬೈ ಮೂಲದ ಮಾಡೆಲ್ ಹೇಳಿಕೊಂಡಿರುವ ವಿಡಿಯೋ ಈಗ ವೈರಲ್ ಆಗಿದೆ.
ಹೇಮಂತ್ ಸೋರೆನ್
ಹೇಮಂತ್ ಸೋರೆನ್

ರಾಂಚಿ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ವಿರುದ್ಧದ ಅತ್ಯಾಚಾರ ಮತ್ತು ಅಪಹರಣಕ್ಕೆ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದ್ದು, ತನ್ನ ಜೀವಕ್ಕೆ ಅಪಾಯ ಇದೆ ಎಂದು ಸಂತ್ರಸ್ತೆ ಯುವತಿ, ಮುಂಬೈ ಮೂಲದ ಮಾಡೆಲ್ ಹೇಳಿಕೊಂಡಿರುವ ವಿಡಿಯೋ ಈಗ ವೈರಲ್ ಆಗಿದೆ.

37 ಸೆಕೆಂಡುಗಳ ವಿಡಿಯೋದಲ್ಲಿ, ನನಗೆ ಜೀವ ಬೆದರಿಕೆ ಇದೆ ಮತ್ತು ನನಗೆ ಏನಾದರೂ ಅನಾಹುತ ಸಂಭವಿಸಿದಲ್ಲಿ, ಅದಕ್ಕೆ ಜಾರ್ಖಂಡ್ ವಿಧಾನಸಭೆ ವಿರೋಧ ಪಕ್ಷದ ನಾಯಕ ಬಾಬುಲಾಲ್ ಮರಾಂಡಿ, ಗೊಡ್ಡಾ ಸಂಸದ ನಿಶಿಕಾಂತ್ ದುಬೆ, ಮರಾಂಡಿಯ ಆಪ್ತ ಸುನಿಲ್ ತಿವಾರಿ ಮತ್ತು ಜಹೂರ್ ಆಲಂ ಅವರ ಹೊಣೆ ಎಂದು ಯುವತಿ ಹೇಳಿದ್ದಾರೆ.

2013ರಲ್ಲಿ ಮುಂಬೈನ ಹೋಟೆಲ್​ವೊಂದರಲ್ಲಿ ಹೇಮಂತ್ ಸೋರೆನ್​ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಈ ಪ್ರಕರಣ ಮುಚ್ಚಿ ಹೋಗಿತ್ತು. 

ಕಳೆದ ಸೋಮವಾರ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು, ಈ ಸಂಬಂಧ ಮಹಾರಾಷ್ಟ್ರ ಗೃಹ ಸಚಿವರಿಗೆ ಟ್ವೀಟ್ ಮಾಡಿದ್ದು, ಗಂಭೀರ ಮತ್ತು ಘೋರ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಸಂತ್ರಸ್ತೆ ಅಥವಾ ಸಂತ್ರಸ್ತೆಯ ಕುಟುಂಬ ಇತ್ಯರ್ಥಪಡಿಸಿಕೊಳ್ಳು ಸಾಧ್ಯವಿಲ್ಲ ಎಂಬ ಸುಪ್ರೀಂ ಕೋರ್ಟ್‌ ತೀರ್ಪನ್ನು ಉಲ್ಲೇಖಿಸಿದ್ದಾರೆ.

ದುಬೆ ವಿರುದ್ಧ ಹೇಮಂತ್ ಸೋರೆನ್​ ಅವರು ರಾಂಚಿ ಸಿವಿಲ್ ಕೋರ್ಟ್ ನಲ್ಲಿ ಕೇಸ್ ದಾಖಲಿಸಿದ್ದಾರೆ. ಇದರ ಬೆನ್ನಲ್ಲೇ ರಾಷ್ಟ್ರೀಯ ಮಹಿಳಾ ಆಯೋಗ ಕೂಡ 2013ರಲ್ಲಿ ಸಂತ್ರಸ್ತೆ ನೀಡಿದ ದೂರಿಗೆ ಸಂಬಂಧಿಸಿದಂತೆ ಪೊಲೀಸರು ಏನು ಕ್ರಮ ಕೈಗೊಂಡಿದ್ದಾರೆ ಎಂಬ ಬಗ್ಗೆ ವಿವರವಾದ ವರದಿ ನೀಡುವಂತೆ ಮಹಾರಾಷ್ಟ್ರ ಡಿಜಿಪಿಗೆ ಪತ್ರ ಬರೆದಿದೆ.

ಇನ್ನ ದುಬೆ ಟ್ವೀಟ್ ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಸಂತ್ರಸ್ತೆ ಯುವತಿ, ನನಗೆ ಬ್ಲ್ಯಾಕ್‌ಮೇಲ್ ಮಾಡಲಾಗುತ್ತಿದೆ, ಜೀವ ಬೆದರಿಕೆ ಹಾಕಲಾಗುತ್ತಿದೆ. ತಪ್ಪು ಮತ್ತು ದಾರಿತಪ್ಪಿಸುವ ಟ್ವೀಟ್‌ಗಳ ಮೂಲಕ ನನ್ನ ನನ್ನ ಗೌರವಕ್ಕೆ ಧಕ್ಕೆ ತರಲಾಗುತ್ತಿದೆ. ನಾನು ನಿಜವಾಗಿಯೂ ಆತಂಕಗೊಂಡಿದ್ದು, ಈ ಸಂಬಂಧ ಮುಂಬೈ ಪೊಲೀಸರಿಗೆ ದೂರು ನೀಡುತ್ತಿದ್ದೇನೆ ಎಂದು ಯುವತಿ ವಿಡಿಯೋದಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com