ಮುಂದಿನ ವಾರ ನಾಲ್ಕು ರಾಜ್ಯಗಳಲ್ಲಿ ಮೊದಲ ಹಂತದ ಕೊರೋನಾ ಲಸಿಕೆ ವಿತರಣೆ

ದೇಶದಲ್ಲಿ ಕೊರೋನಾ ಸೋಂಕು ನಿಯಂತ್ರಣ ಉದ್ದೇಶದಿಂದ ಲಸಿಕೆ ನೀಡುತ್ತಿದ್ದು, ಲಸಿಕೆ ವಿತರಣೆಗೆ ಚಟುವಟಿಕೆ ಬಿರುಸುಗೊಂಡಿದೆ.

Published: 25th December 2020 03:54 PM  |   Last Updated: 25th December 2020 03:54 PM   |  A+A-


7 Indian pharma players race to develop COVID-19 vaccine

ಸಾಂದರ್ಭಿಕ ಚಿತ್ರ

Posted By : Lingaraj Badiger
Source : UNI

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕು ನಿಯಂತ್ರಣ ಉದ್ದೇಶದಿಂದ ಲಸಿಕೆ ನೀಡುತ್ತಿದ್ದು, ಲಸಿಕೆ ವಿತರಣೆಗೆ ಚಟುವಟಿಕೆ ಬಿರುಸುಗೊಂಡಿದೆ.

ಮೊದಲ ಹಂತದಲ್ಲಿ ಡಿಸೆಂಬರ್ 28 ಮತ್ತು 29ರಂದು ಆಂಧ್ರಪ್ರದೇಶ, ಅಸ್ಸಾಂ, ಗುಜರಾತ್ ಮತ್ತು ಪಂಜಾಬ್ ರಾಜ್ಯಗಳಲ್ಲಿ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದ್ದು, ಬಳಿಕ ಕೇಂದ್ರ ಆರೋಗ್ಯ ಸಚಿವಾಲಯದ ಮಾರ್ಗದರ್ಶನದಂತೆ ಇತರ ರಾಜ್ಯಗಳಿಗೂ ಸಹ ಲಸಿಕೆ ವಿತರಣೆ ತೀವ್ರಗೊಳಿಸಲು ಉದ್ದೇಶಿಸಲಾಗಿದೆ.

ಲಸಿಕೆ ನೀಡುವ ಕುರಿತು ಹಲವಾರು ರಾಜ್ಯಗಳು ಸೂಕ್ತ ಕಾರ್ಯ ಯೋಜನೆಯನ್ನು ರೂಪಿಸಿವೆ. ಸೋಂಕು ನಿಯಂತ್ರಣ ಪ್ರದೇಶದಿಂದ ನೀಡುತ್ತಿರುವ ಲಸಿಕೆಯನ್ನು ಅತ್ಯಂತ ವ್ಯವಸ್ಥಿತಗೊಳಿಸಲು ಆರೋಗ್ಯ ಕಾರ್ಯಕರ್ತರು ಹಾಗೂ ಅಧಿಕಾರಿಗಳು ಶ್ರಮಿಸುತ್ತಿದ್ದಾರೆ.

ಈ ಸಂಬಂಧ ರಾಷ್ಟ್ರಮಟ್ಟದಲ್ಲಿ 2,360 ಮಂದಿಗೆ ಸೂಕ್ತ ತರಬೇತಿ ನೀಡಲಾಗಿದ್ದು, ಇವರು ವಿವಿಧ ಹಂತಗಳಲ್ಲಿ ಲಸಿಕೆ ನೀಡುವ ಕುರಿತು ಮಾರ್ಗದರ್ಶನ ಮಾಡುತ್ತಿದ್ದಾರೆ. 6,81,604 ಮಂದಿ ವೈದ್ಯಕೀಯ ಅಧಿಕಾರಿಗಳನ್ನು ಈ ಉದ್ದೇಶಕ್ಕಾಗಿ ಸಜ್ಜುಗೊಳಿಸಲಾಗಿದೆ. ಲಸಿಕೆ ನೀಡುವ ಪ್ರಕ್ರಿಯೆ ಮುಂದಿನ ದಿನಗಳಲ್ಲಿ ತೀವ್ರಗೊಳ್ಳಲಿದೆ.

ಪ್ರತಿಯೊಂದು ಜಿಲ್ಲೆಗಳಲ್ಲೂ ತನ್ನದೇ ಆದ ಕಾರ್ಯಯೋಜನೆಯನ್ನು ರೂಪಿಸಿದ್ದು, ಆರೋಗ್ಯ ಇಲಾಖೆ ಸಿಬ್ಬಂದಿ ಲಸಿಕೆ ನೀಡಲು ಸಜ್ಜಾಗುತ್ತಿದ್ದಾರೆ.


Stay up to date on all the latest ರಾಷ್ಟ್ರೀಯ news
Poll
kangana ranaut

ಗುಲಾಮರು ಇಟ್ಟಿರುವ 'ಇಂಡಿಯಾ' ಹೆಸರನ್ನು 'ಭಾರತ್' ಎಂದು ಬದಲಾಯಿಸುವಂತೆ ಕಂಗನಾ ರಣಾವತ್ ಹೇಳಿದ್ದಾರೆ. ನೀವು ಏನಂತೀರಿ?


Result
ಹೌದು, ಅವರು ಹೇಳಿದ್ದು ಸರಿ.
ಇಲ್ಲ, ಇದು ತುಂಬಾ ಸಿಲ್ಲಿ.
flipboard facebook twitter whatsapp