ರಾಹುಲ್ ಗಾಂಧಿ ಮೊಸಳೆ ಕಣ್ಣೀರು ಸುರಿಸುವ ಮೂಲಕ ರೈತರನ್ನು ದಾರಿ ತಪ್ಪಿಸುತ್ತಿದ್ದಾರೆ: ಸ್ಮೃತಿ ಇರಾನಿ

ಕೇಂದ್ರದ ಹೊಸ ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಸ್ಮೃತಿ ಇರಾನಿ ಅವರು, ರಾಹುಲ್ ಮೊಸಳೆ ಕಣ್ಣೀರು ಸುರಿಸುವ ಮೂಲಕ ರೈತರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಶುಕ್ರವಾರ ಆರೋಪಿಸಿದ್ದಾರೆ.
ಸ್ಮೃತಿ ಇರಾನಿ
ಸ್ಮೃತಿ ಇರಾನಿ

ಅಮೆಥಿ: ಕೇಂದ್ರದ ಹೊಸ ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಸ್ಮೃತಿ ಇರಾನಿ ಅವರು, ರಾಹುಲ್ ಮೊಸಳೆ ಕಣ್ಣೀರು ಸುರಿಸುವ ಮೂಲಕ ರೈತರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಶುಕ್ರವಾರ ಆರೋಪಿಸಿದ್ದಾರೆ.

ತಮ್ಮ ಲೋಕಸಭಾ ಕ್ಷೇತ್ರ ಅಮೆಥಿಯಲ್ಲಿ ಇಂದು ರೈತರ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಇರಾನಿ, "ರಾಹುಲ್ ಗಾಂಧಿ ಕೃಷಿ ಕಾನೂನುಗಳ ಬಗ್ಗೆ ಸುಳ್ಳು ಹೇಳುತ್ತಿದ್ದಾರೆ ಮತ್ತು ರೈತರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದರು.

ಅವರ ಸ್ವಂತ ಜಿಜಾ(ಸೋದರ ಮಾವ) ರೈತರ ಭೂಮಿಯನ್ನು ಅತಿಕ್ರಮಿಸಿಕೊಂಡಿದ್ದಾರೆ ಎಂದು ರಾಬರ್ಟ್ ವಾದ್ರಾ ವಿರುದ್ಧದ ಆರೋಪಗಳನ್ನು ಕೇಂದ್ರ ಸಚಿವೆ ಉಲ್ಲೇಖಿಸಿದರು.

ರೈತ ಸಮಸ್ಯೆಗಳ ಕುರಿತು ಬಹಿರಂಗ ಚರ್ಚೆಗೆ ಬರುವಂತೆ ರಾಹುಲ್ ಗಾಂಧಿಗೆ ಸವಾಲು ಹಾಕಿದ ಇರಾನಿ, ತಾಕತ್ತಿದ್ದರೆ ಅವರು ರೈತರ ಮಧ್ಯೆ ಬಂದು ಚರ್ಚಿಸಲಿ. ಅವರ ಬಣ್ಣ ಬಯಲು ಮಾಡುತ್ತೇನೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com