ರಕ್ಷಣಾ ಸಚಿವ ರಾಜನಾಥ್ ಸಿಂಗ್
ರಕ್ಷಣಾ ಸಚಿವ ರಾಜನಾಥ್ ಸಿಂಗ್

ಕೃಷಿ ಕಾಯ್ದೆಯಿಂದ ರೈತರ ಹಿತಾಸಕ್ತಿಗೆ ಧಕ್ಕೆಯಾದರೆ ತಿದ್ದುಪಡಿಗೆ ಸಿದ್ಧ: ರಾಜನಾಥ್ ಸಿಂಗ್

ರೈತರ ಕೃಷಿ ಸುಧಾರಣಾ ಕಾನೂನುಗಳನ್ನು ಒಂದು ವರ್ಷ ಜಾರಿಗೆ ತರಲಿ ನಂತರ ಅವುಗಳಿಂದ ರೈತರಿಗೆ ಏನೇನು ಲಾಭದಾಯಕವಲ್ಲ, ಪ್ರಯೋಜನವಲ್ಲ ಎಂದು ಸಾಭೀತಾದರೆ ಅಗತ್ಯ ತಿದ್ದುಪಡಿಗೆ ಸರ್ಕಾರ ಸಿದ್ಧ ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ನವದೆಹಲಿ: ರೈತರ ಕೃಷಿ ಸುಧಾರಣಾ ಕಾನೂನುಗಳನ್ನು ಒಂದು ವರ್ಷ ಜಾರಿಗೆ ತರಲಿ ನಂತರ ಅವುಗಳಿಂದ ರೈತರಿಗೆ ಏನೇನು ಲಾಭದಾಯಕವಲ್ಲ, ಪ್ರಯೋಜನವಲ್ಲ ಎಂದು ಸಾಭೀತಾದರೆ ಅಗತ್ಯ ತಿದ್ದುಪಡಿಗೆ ಸರ್ಕಾರ ಸಿದ್ಧ ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ದೆಹಲಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ರಕ್ಷಣಾ ಸಚಿವರು, ಕೇಂದ್ರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಯನ್ನು ಎದುರಿಸಲು ಭಾರತೀಯ ಜನತಾ ಪಕ್ಷದ ಪ್ರಯತ್ನಗಳ ಭಾಗವಾಗಿ ಅವರು ಈ ಮಾತು ಹೇಳಿದ್ದಾರೆ.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವಾದ ಇಂದು ಆಡಳಿತ ಪಕ್ಷವು ರೈತರಪರ ಅಭಿಯಾನ ನಡೆಸುತ್ತಿದೆ.

ರಾಷ್ಟ್ರ ರಾಜಧಾನಿಯ ದ್ವಾರಕಾದಲ್ಲಿ ನಡೆದ ಸಭೆ ಉದ್ದೇಶಿಸಿ ಮಾತನಾಡಿದ ಸಚಿವರು, ಸ್ವತಃ ತಾವು ರೈತರ ಮಗನಾಗಿದ್ದು, ರೈತರ ಹಿತಾಸಕ್ತಿಗೆ ಧಕ್ಕೆಬರುವಂತಹ ಯಾವುದೇ ಕೆಲಸವನ್ನು ಮೋದಿ ಸರ್ಕಾರ ಮಾಡುವುದಿಲ್ಲ ಎಂದು ಭರವಸೆ ನೀಡಿದರು.

ಪ್ರತಿಭಟನಾನಿರತ ರೈತರು ನಮ್ಮವರೆ ಎಂದು ಬಣ್ಣಿಸಿದ ಸಿಂಗ್, 'ಧರಣಿ ಕುಳಿತವರು ರೈತರಾಗಿದ್ದು, ರೈತರ ಕುಟುಂಬಕ್ಕೆ ಜನ್ಮ ನೀಡಿದ್ದಾರೆ. ಅವರ ಬಗ್ಗೆ ನಮಗೆ ಅಪಾರ ಗೌರವವಿದೆ ಎಂದರು. ಮಾತುಕತೆ ಮೂಲಕ ಎಲ್ಲ ಸಮಸ್ಯೆಗಳನ್ನು ಬಗೆಹರಿಸಬಹುದು ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ರೈತರೊಂದಿಗೆ ಮಾತುಕತೆ ನಡೆಸಲು ಬಯಸುತ್ತಾರೆ. ರೈತರ ಹಿತದೃಷ್ಟಿಯಿಂದಲೇ ಸರ್ಕಾರ ಎಲ್ಲ ಕ್ರಮ ಕೈಗೊಳ್ಳುತ್ತಿದೆ ಎಂದು ಸಿಂಗ್ ಹೇಳಿದರು. ಕನಿಷ್ಠ ಬೆಂಬಲ ಬೆಲೆ ಬಗ್ಗೆ ಮಾತನಾಡಿದ ಸಚಿವರು ಕನಿಷ್ಠ ಬೆಂಬಲ ಬೆಲೆ ಕೊನೆಯಾಗಲಿದೆ ಎಂಬುದು ತಪ್ಪು ಕಲ್ಪನೆ ಎಂದೂ ಸ್ಪಷ್ಟಪಡಿಸಿದರು.

Related Stories

No stories found.

Advertisement

X
Kannada Prabha
www.kannadaprabha.com