ಮಾಸ್ಕ್ ಉತ್ಪಾದನಾ ಘಟಕದಲ್ಲಿ ಬೆಂಕಿ ಅವಘಡ; ಓರ್ವ ಸಾವು, ಮೂವರ ರಕ್ಷಣೆ

ಮಾಸ್ಕ್ ಉತ್ಪಾದನಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಓರ್ವ ಸಾವನ್ನಪ್ಪಿ, ಇತರ ಮೂವರನ್ನು ರಕ್ಷಿಸಿರುವ ಘಟನೆ ಇಂದು ಬೆಳಗ್ಗೆ ರಾಷ್ಟ್ರರಾಜಧಾನಿ ನವದೆಹಲಿಯ ಮಾಯಾಪುರಿ ಪ್ರದೇಶದಲ್ಲಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಮಾಸ್ಕ್ ಉತ್ಪಾದನಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಓರ್ವ ಸಾವನ್ನಪ್ಪಿ, ಇತರ ಮೂವರನ್ನು ರಕ್ಷಿಸಿರುವ ಘಟನೆ ಇಂದು ಬೆಳಗ್ಗೆ ರಾಷ್ಟ್ರರಾಜಧಾನಿ ನವದೆಹಲಿಯ ಮಾಯಾಪುರಿ ಪ್ರದೇಶದಲ್ಲಿ ನಡೆದಿದೆ.

ಬೆಳಗ್ಗಿನ ಜಾವ 3.54ರ ವೇಳೆಗೆ ಬೆಂಕಿ ಅವಘಡದ ವಿಷಯ ಮಾಹಿತಿ ಲಭಿಸಿತು. ವಿಷಯ ತಿಳಿದ ತಕ್ಷಣ ದೆಹಲಿ ಅಗ್ನಿಶಾಮಕ ದಳದ 6 ವಾಹನ ತೆರಳಿ ಕಾರ್ಯಾಚರಣೆ ನಡೆಸಿದೆ. ಮೃತರನ್ನು ಜುಗಲ್ ಕಿಶೋರ್ ಎಂದು ಗುರುತಿಸಲಾಗಿದೆ ಎಂದು ದೆಹಲಿ ಅಗ್ನಿಶಾಮಕ ದಳದ ಮುಖ್ಯಸ್ಥ ಅತುಲ್ ಗರ್ಗ್ ತಿಳಿಸಿದ್ದಾರೆ.

ಉತ್ಪಾದನಾ ಘಟಕದ ಮೂರನೇ ಮಹಡಿಯಲ್ಲಿರುವ ಯಂತ್ರಗಳು ಮತ್ತು ಕಚ್ಚಾ ವಸ್ತುಗಳು ಬೆಂಕಿಗೆ ಆಹುತಿಯಾದ ನಂತರ ಈ ಅಪಘಾತ ಸಂಭವಿಸಿದೆ ಎಂದು ಡಿಎಫ್‌ಎಸ್ ಮುಖ್ಯಸ್ಥರು ತಿಳಿಸಿದ್ದಾರೆ. ಡಿಎಫ್‌ ಎಸ್ ತಂಡವು ಘಟಕದ ಬಾಗಿಲು ಮತ್ತು ಗೋಡೆಗಳನ್ನು ಒಡೆದ ನಂತರ ಮೂವರನ್ನು ರಕ್ಷಿಸಲಾಗಿದೆ ಎಂದು ಅವರು ಹೇಳಿದರು. ರಕ್ಷಿಸಿದವರನ್ನು ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com