ಡಿ.31ಕ್ಕೆ ಸಿಬಿಎಸ್‌ಇ ಪರೀಕ್ಷಾ ವೇಳಾಪಟ್ಟಿ ಪ್ರಕಟ!

ಇದೇ ಡಿಸೆಂಬರ್ 31ರಂದು ಸಿಬಿಎಸ್ಇ ಪರೀಕ್ಷಾ ವೇಳಾ ಪಟ್ಟಿ ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ.
ರಮೇಶ್ ಪೊಕ್ರಿಯಾಲ್ ನಿಶಾಂಕ್
ರಮೇಶ್ ಪೊಕ್ರಿಯಾಲ್ ನಿಶಾಂಕ್

ನವದೆಹಲಿ: ಇದೇ ಡಿಸೆಂಬರ್ 31ರಂದು ಸಿಬಿಎಸ್ಇ ಪರೀಕ್ಷಾ ವೇಳಾ ಪಟ್ಟಿ ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು, ಸಿಬಿಎಸ್‌ಇ ಬೋರ್ಡ್‌ ಪರೀಕ್ಷೆಯ ವೇಳಾಪಟ್ಟಿಯನ್ನು ಡಿ.31ರಂದು ಸಂಜೆ ಆರು ಗಂಟೆಗೆ ಪ್ರಕಟಿಸುವುದಾಗಿ ಟ್ವೀಟ್‌ ಮಾಡಿದ್ದಾರೆ.

‘2021ನೇ ಸಾಲಿನಲ್ಲಿ ಸಿಬಿಎಸ್‌ಇ ಬೋರ್ಡ್‌ ಪರೀಕ್ಷೆಯನ್ನು ಎದುರಿಸಲಿರುವ ವಿದ್ಯಾರ್ಥಿಗಳಿಗೆ ಯಾವಾಗಿನಿಂದ ಪರೀಕ್ಷೆ ಆರಂಭವಾಗುವುದು ಎನ್ನುವುದನ್ನು ಡಿ.31ರಂದು ಘೋಷಿಸಲಿದ್ದೇನೆ’ ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಕೋವಿಡ್‌–19 ಕಾರಣದಿಂದಾಗಿ ಮುಂದಿನ ವರ್ಷದ ಫೆಬ್ರುವರಿಯವರೆಗೆ ಸಿಬಿಎಸ್‌ಇ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ನಡೆಸುವುದಿಲ್ಲ ಎಂದು ಕಳೆದ ಮಂಗಳವಾರ ನಿಶಾಂಕ್‌ ತಿಳಿಸಿದ್ದರು. ಆದರೆ ಪರಿಸ್ಥಿತಿಯನ್ನು ನೋಡಿಕೊಂಡು ಹಾಗೂ ತಜ್ಞರ ಜೊತೆ ಚರ್ಚೆ ನಡೆಸಿ, ಪರೀಕ್ಷೆ ನಡೆಸುವ ಕುರಿತು  ನಿರ್ಧಾರ ಕೈಗೊಳ್ಳಲಾಗುವುದು ಎಂದೂ ಅವರು ತಿಳಿಸಿದ್ದರು. ಇದೀಗ ಡಿಸೆಂಬರ್ 31ರಂದು ಪರೀಕ್ಷಾ ವೇಳಾಪಟ್ಟಿ ಘೋಷಣೆ ಮಾಡುವುದಾಗಿ ಟ್ವೀಟ್ ಮಾಡಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com