ಉತ್ತರ ಪ್ರದೇಶ: ಹೊತ್ತಿ ಉರಿದ ಮನೆ, ಮೂವರು ಮಕ್ಕಳು ಸೇರಿ ನಾಲ್ವರು ಸಜೀವ ದಹನ
ಉತ್ತರ ಪ್ರದೇಶದ ಬಾಂಡಾ ಜಿಲ್ಲೆಯ ಡುಬೆನ್ ಕಾ ಪೂರ್ವಾ ಗ್ರಾಮದಲ್ಲಿನ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
Published: 26th December 2020 05:57 PM | Last Updated: 26th December 2020 05:57 PM | A+A A-

ಸಾಂದರ್ಭಿಕ ಚಿತ್ರ
ಬಾಂಡಾ: ಉತ್ತರ ಪ್ರದೇಶದ ಬಾಂಡಾ ಜಿಲ್ಲೆಯ ಡುಬೆನ್ ಕಾ ಪೂರ್ವಾ ಗ್ರಾಮದಲ್ಲಿನ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಇಂದು ಬೆಳಗ್ಗೆ ಸಂಗೀತ ಯಾದವ್(28) ಅವರ ಮನೆಯಿಂದ ಹೊಗೆ ಹೊರಬರುತ್ತಿರುವುದನ್ನು ಗ್ರಾಮಸ್ಥರು ಗಮನಿಸಿದ್ದಾರೆ. ಸಂಗೀತ ಯಾದವ್ ಮತ್ತು ಅವರ ಇಬ್ಬರು ಹೆಣ್ಣು ಮಕ್ಕಳು ಹಾಗೂ ಓರ್ವ ಮಗ ಸಜೀವ ದಹನವಾಗಿದ್ದಾರೆ ಎಂದು ಎಎಸ್ ಪಿ ಮಹೇಂದ್ರ ಪ್ರತಾಪ್ ಸಿಂಗ್ ಚೌಹಾನ್ ಅವರು ಹೇಳಿದ್ದಾರೆ.
ಬೆಂಕಿ ಆಕಸ್ಮಿಕಕ್ಕೆ ತಕ್ಷಣ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲಾ ಆಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಮತ್ತು ತನಿಖೆ ನಡೆಯುತ್ತಿದೆ ಎಂದು ಎಎಸ್ಪಿ ಹೇಳಿದ್ದಾರೆ.