ಜಮ್ಮು-ಕಾಶ್ಮೀರ: ಉಗ್ರರ ಅಡಗು ತಾಣಗಳ ಮೇಲೆ ಸೇನೆ ದಾಳಿ, ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ವಶಕ್ಕೆ

ಜಮ್ಮು ಮತ್ತು ಕಾಶ್ಮೀರದ ನರ್ವಾಲ್ ಜಿಲ್ಲೆಯಲ್ಲಿದ್ದ ಉಗ್ರರ ಅಡಗುತಾಣಗಳ ಮೇಲೆ ಭದ್ರತಾಪಡೆಗಳು ದಾಳಿ ನಡೆಸಿದ್ದು, ದಾಳಿಯಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ. 
ಶಸ್ತ್ರಾಸ್ತ್ರ ವಶಕ್ಕೆ ಪಡೆದಿರುವ ಪೊಲೀಸರು
ಶಸ್ತ್ರಾಸ್ತ್ರ ವಶಕ್ಕೆ ಪಡೆದಿರುವ ಪೊಲೀಸರು

ನರ್ವಾಲ್; ಜಮ್ಮು ಮತ್ತು ಕಾಶ್ಮೀರದ ನರ್ವಾಲ್ ಜಿಲ್ಲೆಯಲ್ಲಿದ್ದ ಉಗ್ರರ ಅಡಗುತಾಣಗಳ ಮೇಲೆ ಭದ್ರತಾಪಡೆಗಳು ದಾಳಿ ನಡೆಸಿದ್ದು, ದಾಳಿಯಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ. 

ಕಾರೊಂದರಲ್ಲಿ ರಯೀಜ್ ಅಹ್ಮದ್ ದಾರ್ ಹಾಗೂ ಸಬ್ಜರ್ ಅಹ್ಮದ್ ಶೇಖ್ ಎಂಬ ಇಬ್ಬರು ಶಂಕಿತರ ಉಗ್ರರು ತೆರಳುತ್ತಿರುವ ಕುರಿತು ಮಾಹಿತಿ ತಿಳಿದುಬರುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಭದ್ರತಾಪಡೆಗಳು ಕಾರ್ಯಾಚರಣೆ ಆರಂಭಿಸಿದ್ದವು. 

ಈ ವೇಳೆ ಶಂಕಿತರಿಂದ 1 ಎಕೆ ಸಿರೀಸ್ ರೈಫಲ್, 1 ಪಿಸ್ತೂಲ್, 2 ನಿಯತಕಾಲಿಕೆಗಳು, 60 ಎಕೆ ರೈಫಲ್ನ ಗುಂಡುಗಳು, 15 ಪಿಸ್ತೂಲಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಈ ಕುರಿತು ಎಫ್‌ಐಆರ್ ನಂ. 359/20 ಯು / ಎಸ್ 120-ಬಿ / 121/121-ಎ / 122 ಐಪಿಸಿ, 7/25 ಎ ಆಕ್ಟ್, 18/20/38/39 ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (ಯುಎಪಿಎ), 1967 ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com