ಶೋಪಿಯಾನ್‌: ಓರ್ವ ಉಗ್ರನನ್ನು ಹೊಡೆದುರುಳಿಸಿದ ಸೇನೆ, ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ಉಗ್ರಗಾಮಿಗಳ ನಡುವೆ ನಡೆದ ಮುಖಾಮುಖಿ ಗುಂಡಿನ ದಾಳಿಯಲ್ಲಿ ಉಗ್ರನೊಬ್ಬ ಸಾವನ್ನಪ್ಪಿದ್ದು, ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾರತೀಯ ಸೇನೆ
ಭಾರತೀಯ ಸೇನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ಉಗ್ರಗಾಮಿಗಳ ನಡುವೆ ನಡೆದ ಮುಖಾಮುಖಿ ಗುಂಡಿನ ದಾಳಿಯಲ್ಲಿ ಉಗ್ರನೊಬ್ಬ ಸಾವನ್ನಪ್ಪಿದ್ದು, ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದಕ್ಷಿಣ ಕಾಶ್ಮೀರದ ಶೋಪಿಯಾನ್‌ನ ಕನಿಗಮ್ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಆಧಾರದ ಮೇಲೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದವು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೇನಾ ಪಡೆಗಳು ಶೋಧ ಕಾರ್ಯ ನಡೆಸುತ್ತಿದ್ದ ವೇಳೆ ಯೋಧರ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆಯ ಯೋಧರು ಗುಂಡಿನ ದಾಳಿ ನಡೆಸಿದ್ದು ಪರಿಣಾಮ ಓರ್ವ ಉಗ್ರ ಹತ್ಯೆಯಾಗಿದ್ದಾನೆ. 

ಹತ್ಯೆಗೀಡಾದ ಉಗ್ರನ ಗುರುತು ಮತ್ತು ಸಂಘಟನೆಗಳ ಜೊತೆಗಿನ ಸಂಬಂಧವನ್ನು ಕಂಡುಹಿಡಿಯಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com