ಪುದುಚೇರಿಯಲ್ಲಿ ಪಂಚಾಯತ್ ಚುನಾವಣೆ ನಡೆಸದ ಕೆಲವರು ದೆಹಲಿಯಲ್ಲಿ ಪ್ರಜಾಪ್ರಭುತ್ವದ ಪಾಠ ಮಾಡುತ್ತಿದ್ದಾರೆ: ಪ್ರಧಾನಿ ಮೋದಿ

ಜಮ್ಮು ಮತ್ತು ಕಾಶ್ಮೀರದ ಡಿಡಿಸಿ ಚುನಾವಣೆ ಕಾಶ್ಮೀರ ಕಣಿವೆಯಲ್ಲಿ ಹೊಸ ಅಧ್ಯಾಯವನ್ನು ಬರೆದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪಾರದರ್ಶಕ ಚುನಾವಣಾ ಪ್ರಕ್ರಿಯೆ ಮತ್ತು ಮತದಾರರು ಉತ್ಸಾಹದಿಂದ ಭಾಗವಹಿಸುವುದನ್ನು ಉಲ್ಲೇಖಿಸಿ ಇದು ಭಾರತಕ್ಕೆ "ಹೆಮ್ಮೆಯ ಕ್ಷಣ" ಎಂದು ಪ್ರಧಾನಿ ನುಡಿದರು.
ನರೇಂದ್ರ ಮೋದಿ
ನರೇಂದ್ರ ಮೋದಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಡಿಡಿಸಿ ಚುನಾವಣೆ ಕಾಶ್ಮೀರ ಕಣಿವೆಯಲ್ಲಿ ಹೊಸ ಅಧ್ಯಾಯವನ್ನು ಬರೆದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪಾರದರ್ಶಕ ಚುನಾವಣಾ ಪ್ರಕ್ರಿಯೆ ಮತ್ತು ಮತದಾರರು ಉತ್ಸಾಹದಿಂದ ಭಾಗವಹಿಸುವುದನ್ನು ಉಲ್ಲೇಖಿಸಿ ಇದು ಭಾರತಕ್ಕೆ "ಹೆಮ್ಮೆಯ ಕ್ಷಣ" ಎಂದು ಪ್ರಧಾನಿ ನುಡಿದರು.

ಆಯುಷ್ಮಾನ್ ಭಾರತ್ ಯೋಜನೆಯ ಪ್ರಯೋಜನಗಳನ್ನು ಕೇಂದ್ರಾಡಳಿತ ಪ್ರದೇಶದ ಎಲ್ಲಾ ನಿವಾಸಿಗಳಿಗೆ ವಿಸ್ತರಿಸಲು ವಿಡಿಯೋ-ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಪಂಚಾಯತ್ ಮತ್ತು ಪುರಸಭೆ ಚುನಾವಣೆಗಳನ್ನು ನಡೆಸದಿರುವ ಕಾಂಗ್ರೆಸ್ ಪ್ರಜಾಪ್ರಭುತ್ವದ ಪಾಠ ಒಪ್ಪಿಸುತ್ತಿದೆ ಎಂದು ವಿಪಕ್ಶಕ್ಕೆ ತಿರುಗೇಟು ಕೊಟ್ಟರು. ಅಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ.

ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾದ ನಂತರ ಇದೇ ಮೊದಲ ಬಾರಿಗೆ ಮೂರು ಹಂತದಲ್ಲಿ ಇಲ್ಲಿ ಚುನಾವಣೆ ನಡೆದಿದೆ.

ಹೆಸರನ್ನು ಉಲ್ಲೇಖಿಸದೆ ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಪ್ರಧಾನಿ ಮೋದಿ ದೆಹಲಿಯಲ್ಲಿ ಕೆಲವರು ಪ್ರಜಾಪ್ರಭುತ್ವದ ಬಗ್ಗೆಪ್ರತಿದಿನವೂ ಪಾಠ ಮಾಡುತ್ತಾರೆ. ಅಲ್ಲದೆ ಎದುರಾಳಿಗಳಿಗೆ "ನಿಂದನೆ" ಮಾಡುತ್ತಾರೆ. ಆದರೆ ಸುಪ್ರೀಂ ಕೋರ್ಟ್ ಆದೇಶದ ಹೊರತಾಗಿಯೂ ಅವರು ಪುದುಚೇರಿಯಲ್ಲಿ ಪಂಚಾಯತ್ ಚುನಾವಣೆ ನಡೆಸಲಿಲ್ಲ ಏಕೆ? ಎಂದು ಕೇಳಿದ್ದಾರೆ.

ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರ ಹೋರಾಟಕ್ಕೆ ಸಂಬಂಧಿಸಿದಂತೆ ಮೋದಿ ಸರ್ಕಾರದ ಮೇಲೆ ಇತ್ತೀಚೆಗೆ ನ ಕಾಂಗ್ರೆಸ್ ಮಾಡಿರುವ ಟೀಕೆಗಳಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭಾರತದಲ್ಲಿ "ಪ್ರಜಾಪ್ರಭುತ್ವವೇ ಇಲ್ಲ"ಎಂದು ಹೇಳಿಕೊಂಡಿದ್ದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಮಂಡಳಿ (ಡಿಡಿಸಿ) ಚುನಾವಣೆಯಲ್ಲಿ ಜನರು ತಮ್ಮ ಕೆಲಸಗಳಿಂದಾಗಿ ಗೆಲುವು ಸಾಧಿಸಿದ್ದಾರೆ ಹೊರತು ಹೆಸರಿನಿಂದಲ್ಲ ಎಂದು ಪ್ರಧಾನಿ ಹೇಳಿದರು. ಜಮ್ಮು ಮತ್ತು ಕಾಶ್ಮೀರದ ಸರ್ವತೋಮುಖ ಅಭಿವೃದ್ಧಿಯನ್ನು ಮಾಡಲು ಕೇಂದ್ರ ಬದ್ದವಾಗಿದೆ ಎಂದು ಅವರು ಹೇಳಿದ್ದಾರೆ.

ದೇಶದಲ್ಲಿ ದಶಕಗಳಿಂದ ಅಧಿಕಾರದಲ್ಲಿದ್ದವರ ದೊಡ್ಡ ತಪ್ಪೆಂದರೆ ಜಮ್ಮು ಮತ್ತು ಕಾಶ್ಮೀರ ಮತ್ತು ಈಶಾನ್ಯ ರಾಜ್ಯಗಳು ಸೇರಿದಂತೆ ಗಡಿ ಪ್ರದೇಶಗಳ ಅಭಿವೃದ್ಧಿಯನ್ನು ನಿರ್ಲಕ್ಷಿದ್ದೇ ಆಗಿದೆ.  ಆದರೆ ನಮ್ಮ ಸರ್ಕಾರ ಈ ಕೊರತೆಯನ್ನು ನೀಗಿಸಿದೆ ಎಂದು ಮೋದಿ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com