ಉತ್ತರ ಪ್ರದೇಶ: ಪೊಲೀಸ್ ಭದ್ರತೆಯಲ್ಲಿ ಹಿಂದೂ ಯುವಕರನ್ನು ವರಿಸಿದ ಮುಸ್ಲಿಂ ಯುವತಿಯರು 

ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಮುಸ್ಲಿಂ ಮಹಿಳೆಯರು ಇಬ್ಬರು ಹಿಂದೂ ಯುವಕರನ್ನು ಪೊಲೀಸ್ ಭದ್ರತೆಯಲ್ಲಿ ವಿವಾಹವಾಗಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ. 
ಅಂತರ್ಧರ್ಮೀಯ ವಿವಾಹ
ಅಂತರ್ಧರ್ಮೀಯ ವಿವಾಹ

ಬರೇಲಿ: ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಮುಸ್ಲಿಂ ಮಹಿಳೆಯರು ಇಬ್ಬರು ಹಿಂದೂ ಯುವಕರನ್ನು ಪೊಲೀಸ್ ಭದ್ರತೆಯಲ್ಲಿ  ವಿವಾಹವಾಗಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ. 

ಮುಸ್ಲಿಂ ಮಹಿಳೆಯರು ಮತಾಂತರಗೊಂಡಿದ್ದು ಪೊಲೀಸ್ ಭದ್ರತೆಯನ್ನು ನೀಡಲಾಗಿದೆ. ಮೊದಲನೇ ಪ್ರಕರಣ ಬರೇಲಿಯ ಹಫೀಜ್ ಗಂಜ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ವರದಿಯಾಗಿದ್ದು ಪೊಲೀಸರು ಎರಡೂ ಕುಟುಂಬದವರನ್ನು ಕರೆಸಿ ಯಾವುದೇ ಪ್ರಕರಣ ದಾಖಲಿಸಿಕೊಳ್ಳದೇ ಮಾತುಕತೆಯ ಮೂಲಕ ಸೌಹಾರ್ದಯುತವಾಗಿ ಪ್ರಕರಣವನ್ನು ಇತ್ಯರ್ಥಗೊಳಿಸಿದ್ದಾರೆ.

ಆದರೆ ಬಹೇಡಿಯ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿರುವ ಪ್ರಕರಣದಲ್ಲಿ ಮಹಿಳೆಯ ಕುಟುಂಬ ಸದಸ್ಯರು ಯುವಕನ ವಿರುದ್ಧ ಅಪಹರಣ ಹಾಗೂ ದರೋಡೆ ಪ್ರಕರಣವನ್ನು ದಾಖಲಿಸಿದ್ದರು

ಎರಡೂ ಪ್ರಕರಣಗಳಲ್ಲಿ ಯುವಕ-ಯುವತಿಯರು ವಯಸ್ಕರಾಗಿದ್ದು, ಎರಡೂ ಪ್ರಕರಣಗಳಲ್ಲಿ ಯುವತಿಯರ ಹೇಳಿಕೆಯನ್ನು ಪರಿಗಣಿಸಿ, ಭದ್ರತೆಯನ್ನು ಒದಗಿಸಿದ್ದೇವೆ ಎಂದು ಎಸ್ಎಸ್ ಪಿ ತಿಳಿಸಿದ್ದಾರೆ. ನಂತರ ಎರಡೂ ಕುಟುಂಬ ಸದಸ್ಯರನ್ನು ಕರೆಸಿ ಮಾತುಕತೆ ಮೂಲಕ ಪ್ರಕರಣವನ್ನು ಇತ್ಯರ್ಥಗೊಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com