ಸೋನಿಯಾ ಗಾಂಧಿ, ರಾಹುಲ್ ವಿರುದ್ಧ ಟೀಕೆ: ಶಿವಸೇನೆ ಎಚ್ಚರಿಸಿದ ಕಾಂಗ್ರೆಸ್!

ಶಿವಸೇನಾ ಮುಖವಾಣಿ ಸಾಮ್ನಾದಲ್ಲಿ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ಪುತ್ರ ರಾಹುಲ್ ಗಾಂಧಿ ಅವರನ್ನು ಶಿವಸೇನಾ ಮುಖಂಡ ಸಂಜಯ್ ರಾವತ್ ಟೀಕಿಸಿರುವುದರ ಬಗ್ಗೆ ಮಹಾರಾಷ್ಟ್ರ ಕಾಂಗ್ರೆಸ್ ಮುಖಂಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮುಂಬೈ: ಶಿವಸೇನಾ ಮುಖವಾಣಿ ಸಾಮ್ನಾದಲ್ಲಿ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ಪುತ್ರ ರಾಹುಲ್ ಗಾಂಧಿ ಅವರನ್ನು ಶಿವಸೇನಾ ಮುಖಂಡ ಸಂಜಯ್ ರಾವತ್ ಟೀಕಿಸಿರುವುದರ ಬಗ್ಗೆ ಮಹಾರಾಷ್ಟ್ರ ಕಾಂಗ್ರೆಸ್ ಮುಖಂಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಯುಪಿಎನ್ನು ಎನ್ ಜಿಒ ಎಂದು ಕರೆದಿದ್ದ ಸಂಜಯ್ ರಾವತ್, ಸೋನಿಯಾ ಗಾಂಧಿ ಬದಲಿಗೆ ಶರದ್ ಪವಾರ್ ಅವರನ್ನು ಯುಪಿಎ ಅಧ್ಯಕ್ಷರನ್ನಾಗಿ ಮಾಡಬೇಕೆಂದು ಒತ್ತಾಯಿಸಿದ್ದರು. ಅಲ್ಲದೇ, ಯುಪಿಎಗೆ ಅಮಿತ್ ಶಾ ಹಾಗೂ ನರೇಂದ್ರ ಮೋದಿ ಅವರಂತಹ ಪ್ರಭಾವಶಾಲಿ ಮತ್ತು ಸಮರ್ಪಿತ ನಾಯಕರ ಕೊರತೆಯಿದೆ ಎಂದು ರಾವತ್ ಹೇಳಿಕೆ ನೀಡಿದ್ದರು.

ಶಿವಸೇನೆ ಪ್ರಾದೇಶಿಕ ಪಕ್ಷವಾಗಿದ್ದು, ಅದರೊಂದಿಗೆ ರಾಷ್ಟ್ರೀಯ ಮಟ್ಟದಲ್ಲಿ ಯಾವುದೇ ಮೈತ್ರಿ ಮಾಡಿಕೊಂಡಿಲ್ಲ. ಮಹಾರಾಷ್ಟ್ರಕ್ಕೆ ಸಿಮೀತವಾಗಿ ಮಾತ್ರ ಶಿವಸೇನೆಯೊಂದಿಗೆ ಮೈತ್ರಿ ಮಾಡಿಕೊಳ್ಳಲಾಗಿದೆ. ಆದ್ದರಿಂದ ಅವರು ಟೀಕೆ, ನಮಗೆ ಪಾಠ ಹೇಳುವಂತಹ ಕೆಲಸ ಮಾಡಬಾರದು. ನಿರ್ಧಾರ ಕೈಗೊಳ್ಳುವ ಸಾಮರ್ಥ್ಯ ನಮಗಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಮುಖಂಡ ಅಶೋಕ್ ಚವಾಣ್ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಯಾವುದೇ ನಕಾರಾತ್ಮಕ ಹೇಳಿಕೆಯನ್ನು ಸಹಿಸುವುದಿಲ್ಲ, ಸೋನಿಯಾ ಗಾಂಧಿ ಯುಪಿಎ ಅಧ್ಯಕ್ಷರಾಗಿದ್ದು, ಮುಂದೆಯೂ ಕೂಡಾ ಅವರೇ ಇರಲಿದ್ದಾರೆ. ಸಾಮಾನ್ಯ ಕಾರ್ಯಕ್ರಮ ಸಿದ್ದಾಂತದಡಿಯಲ್ಲಿ ಮಹಾರಾಷ್ಟ್ರ ಸರ್ಕಾರ ರಚನೆಯಾಗಿದೆ. ಸರ್ಕಾರ ಮುನ್ನಡೆಸುವ ಜವಾಬ್ದಾರಿ ಕಾಂಗ್ರೆಸ್ ಮಾತ್ರ ಮೇಲಿಲ್ಲ, ಆದರೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕೂಡಾ ಸರ್ಕಾರದ ಭಾಗವಾಗಿ ಎಲ್ಲಾ ಪಕ್ಷಗಳನ್ನು ಪರಿಗಣಿಸಬೇಕೆಂದು ಇನ್ನೊಬ್ಬ ಕಾಂಗ್ರೆಸ್ ಮುಖಂಡ ನಶೀಮ್ ಖಾನ್ ಸಲಹೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com