ರೈತರಿಗೆ ಪರಿಹಾರ ನೀಡದಿದ್ದಲ್ಲಿ ಪ್ರತಿಭಟನೆ: ಪವನ್ ಕಲ್ಯಾಣ್ ಎಚ್ಚರಿಕೆ 

ನಿವಾರ್ ಚಂಡಮಾರುತದಿಂದ ಬೆಳೆ ನಷ್ಟವಾದ ರೈತರಿಗೆ ಪ್ರತಿ ಎಕರೆಗೆ 35 ಸಾವಿರ ರೂ. ಪರಿಹಾರ ನೀಡಬೇಕೆಂದು ಜನ ಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ ಆಂಧ್ರ ಪ್ರದೇಶ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಒಂದು ವೇಳೆ ಬೇಡಿಕೆ ಈಡೇರಿಸುವಲ್ಲಿ ಸರ್ಕಾರ ವಿಫಲವಾದ್ದಲ್ಲಿ ಪ್ರತಿಭಟನೆ ನಡೆಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.
ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್
ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್

ವಿಜಯವಾಡ: ನಿವಾರ್ ಚಂಡಮಾರುತದಿಂದ ಬೆಳೆ ನಷ್ಟವಾದ ರೈತರಿಗೆ ಪ್ರತಿ ಎಕರೆಗೆ 35 ಸಾವಿರ ರೂ. ಪರಿಹಾರ ನೀಡಬೇಕೆಂದು ಜನ ಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ ಆಂಧ್ರ ಪ್ರದೇಶ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಒಂದು ವೇಳೆ ಬೇಡಿಕೆ ಈಡೇರಿಸುವಲ್ಲಿ ಸರ್ಕಾರ ವಿಫಲವಾದ್ದಲ್ಲಿ ಪ್ರತಿಭಟನೆ ನಡೆಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

ಚಂಡಮಾರುತದಿಂದ ಭಾರೀ ಪ್ರಮಾಣದ  ನಷ್ಟ ಅನುಭವಿಸುತ್ತಿರುವ ಪರಿಹಾರ ಕೋರಿ ಕೃಷ್ಣಾ ಜಿಲ್ಲಾಧಿಕಾರಿಗೆ ಸೋಮವಾರ ಮನವಿ ಸಲ್ಲಿಸಿದ ಪವನ್ ಕಲ್ಯಾಣ್, ಮುಂದಿನ ಬಜೆಟ್ ಅಧಿವೇಶನಕ್ಕೂ ಮುನ್ನ ರೈತರಿಗೆ ಸರ್ಕಾರ ಪರಿಹಾರ ನೀಡದಿದ್ದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ ರಾಜ್ಯ ಆಸೆಂಬ್ಲಿಗೆ ಮುತ್ತಿಗೆ ಹಾಕಲಾಗುವುದು ಎಂದು ಹೇಳಿದರು.

ಮಚಲಿಪಟ್ಟಣಂನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪವನ್ ಕಲ್ಯಾಣ್, ಚುನಾವಣೆಯಲ್ಲಿ ಸೋಲಿನ ನಂತರ ಭಯದಿಂದ ಓಡಿಹೋಗುತ್ತೇವೆ ಎಂಬ ಭ್ರಮೆಯಲ್ಲಿ ಕೆಲವರಿದ್ದಾರೆ. ಮಹತ್ವಾಕಾಂಕ್ಷೆಗಳನ್ನು ಹೊಂದಿರುವ ವ್ಯಕ್ತಿಗಳಿಗೆ ಯಾವುದೇ ಸೋಲು ಇಲ್ಲ ಎಂಬುದನ್ನು ಅವರು ಮರೆತಿದ್ದಾರೆ, ಆದರೆ, ಅರ್ಹತೆಯಿಂದ ಮಾತ್ರ ಮುಂದೆ ಹೆಜ್ಜೆ ಇಡುತ್ತೇವೆ ಎಂದರು.

ಸಿನಿಮಾ ಮತ್ತು ರಾಜಕೀಯ ಎರಡರಲ್ಲೂ ಪಯಣದ ಕುರಿತಂತೆ ಪ್ರತಿಕ್ರಿಯಿಸಿದ ಪವನ್ ಕಲ್ಯಾಣ್, ಗ್ಯಾಮ್ಲಿಂಗ್ ನಂತಹ ವಿವಿಧ ರೀತಿಯ ವ್ಯವಹಾರದಲ್ಲಿ ತೊಡಗಿರುವವರು ರಾಜಕೀಯದಲ್ಲಿ ಇರಬೇಕಾದರೆ ಪ್ರಾಮಾಣಿಕ ವ್ಯಕ್ತಿಗಳು, ರಾಜಕೀಯ, ಸಿನಿಮಾದಲ್ಲಿದ್ದರೆ ಎನು ತೊಂದರೆ ಎಂದು ಪ್ರಶ್ನಿಸಿದರು. ಜನಪ್ರತಿನಿಧಿಗಳು ಜನರಿಗೆ ಏಕೆ ಏನು ಮಾಡುತ್ತಿಲ್ಲ ಎಂಬುದನ್ನು ಕೇಳಲು ಇದು ಸೂಕ್ತ ಸಮಯವಾಗಿದೆ ಎಂದು ಪವನ್ ಕಲ್ಯಾಣ್ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com