ಜಾಮಿಯಾ ಆಯ್ತು ಈಗ ಶಾಹೀನ್ ಬಾಗ್ ನಲ್ಲಿ ಸಿಎಎ ವಿರೋಧಿ ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ

ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಬಳಿ ಪೌರತ್ವ ತಿದ್ದುಪಡಿ ಕಾಯ್ದೆ( ಸಿಎಎ) ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಅಪ್ರಾಪ್ತನೋರ್ವ ಗುಂಡಿನ ದಾಳಿ ನಡೆಸಿದ ಬೆನ್ನಲ್ಲೇ ಈಗ ಶಾಹೀನ್ ಬಾಗ್ ನಲ್ಲಿ ಸಿಎಎ...
ಗುಂಡು ಹಾರಿಸಿದ ವ್ಯಕ್ತಿಯ ಬಂಧನ
ಗುಂಡು ಹಾರಿಸಿದ ವ್ಯಕ್ತಿಯ ಬಂಧನ

ನವದೆಹಲಿ: ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಬಳಿ ಪೌರತ್ವ ತಿದ್ದುಪಡಿ ಕಾಯ್ದೆ( ಸಿಎಎ) ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಅಪ್ರಾಪ್ತನೋರ್ವ ಗುಂಡಿನ ದಾಳಿ ನಡೆಸಿದ ಬೆನ್ನಲ್ಲೇ ಈಗ ಶಾಹೀನ್ ಬಾಗ್ ನಲ್ಲಿ ಸಿಎಎ ವಿರೋಧಿ ಪ್ರತಿಭಟನಾಕಾರರ ಮೇಲೆ ಯುವನೋರ್ವ ಗುಂಡು ಹಾರಿಸಿದ್ದಾನೆ. ಅದೃಷ್ಟವಶಾತ್ ಯಾರಿಗೂ ಅಪಾಯವಾಗಿಲ್ಲ.

ಇಂದು ಸಂಜೆ 5 ಗಂಟೆಯ ಸುಮಾರಿಗೆ ಜೆಸೋಲಾ ರೆಡ್​ಲೈಟ್​ ಪ್ರದೇಶದ ಸಮೀಪ ಅಪರಿಚಿತ ವ್ಯಕ್ತಿ ಗುಂಡಿನ ದಾಳಿ ನಡೆಸಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವೇದಿಕೆಯ ಹಿಂಭಾಗ ವ್ಯಕ್ತಿಯೊಬ್ಬ ಗಾಳಿಯಲ್ಲಿ ಗುಂಡು ಹಾರಿಸಿದ್ದು, ಕೂಡಲೇ ಪೊಲೀಸರು ಆತನನ್ನು ಬಂಧಿಸಿದ್ದಾರೆ ಎಂದು ದೆಹಲಿ ಡಿಸಿಪಿ ಚಿನ್ಮಯ್​ ಬಿಸ್ವಲ್​ ತಿಳಿಸಿದ್ದಾರೆ.

ನಮ್ಮ ದೇಶದಲ್ಲಿ ಹಿಂದುಗಳ ಹೊರತಾಗಿ ಇನ್ಯಾರೂ ತಮ್ಮ ಅಭಿಪ್ರಾಯಗಳನ್ನು ಹೇರಬಾರದು ಎಂದು ಗುಂಡು ಹಾರಿಸಿರುವುದಾಗಿ ವ್ಯಕ್ತಿ ಹೇಳಿದ್ದು, ವಿಡಿಯೋ ವೈರಲ್​ ಆಗಿದೆ.

ಈ ವ್ಯಕ್ತಿ ಶಾಹೀನ್​ ಬಾಗ್​ ಪ್ರತಿಭಟನಾಕಾರರ ಬಳಿ ಬಂದು ಅಲ್ಲಿಂದ ಜಾಗ ಖಾಲಿ ಮಾಡುವಂತೆ ಬೆದರಿಸುತ್ತಿದ್ದ. ಬಳಿಕ ಗುಂಡು ಹಾರಿಸಿದ ಎಂದು ಸ್ಥಳೀಯರು ಹೇಳಿದ್ದಾರೆ.

ತನ್ನ ಹೆಸರು ಕಪಿಲ್​, ಪೂರ್ವ ದೆಹಲಿಯ ದಲ್ಲುಪುರಾ ಗ್ರಾಮದ ನಿವಾಸಿ ಎಂದು ಆತ ಪೊಲೀಸರಿಗೆ ತಿಳಿಸಿದ್ದಾನೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com