ನವದೆಹಲಿ: ಗಂಗಾ ರಾಮ್ ಆಸ್ಪತ್ರೆಗೆ ದಾಖಲಾದ ಸೋನಿಯಾ ಗಾಂಧಿ

ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ಸಂಜೆ ಇಲ್ಲಿನ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ

ನವದೆಹಲಿ: ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ಸಂಜೆ ಇಲ್ಲಿನ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಕಳೆದ ವರ್ಷದಿಂದ ಆಗಾಗ್ಗೆ ವೈದ್ಯಕೀಯ ಪರೀಕ್ಷೆಗಾಗಿ ಅಮೆರಿಕಾಕ್ಕೆ ತೆರಳುತ್ತಿದ್ದ ಸೋನಿಯಾ ಗಾಂಧಿ, ಇಂದು ಹಠಾತ್ತನೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಾಮಾನ್ಯ ತಪಾಸಣೆಗಾಗಿ ಅವರು ಇಂದು ಸಂಜೆ 7 ಗಂಟೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಯಾವುದೇ ಗಂಭೀರ ಸಮಸ್ಯೆ ಇಲ್ಲ ಎಂದು ಮೂಲಗಳು ತಿಳಿಸಿವೆ. 

ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಅವರೊಂದಿಗೆ ಪುತ್ರ ರಾಹುಲ್ ಗಾಂಧಿ, ಪುತ್ರಿ ಪ್ರಿಯಾಂಕಾ ಗಾಂಧಿ ಕೂಡ ಇದ್ದರು ಎನ್ನಲಾಗಿದೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com