ಬಿಜೆಪಿ ಸಂಸದೀಯ ಪಕ್ಷ ಸಭೆ ಪ್ರಗತಿಯಲ್ಲಿ, ಪ್ರಧಾನಿ ಸೇರಿ ಬಿಜೆಪಿ ನಾಯಕರು ಭಾಗಿ 

ಭಾರತೀಯ ಜನತಾ ಪಾರ್ಟಿಯ ಸಂಸದೀಯ ಪಕ್ಷದ ಸಭೆ ಸಂಸತ್ತು ಭವನದಲ್ಲಿ ಮುಂದುವರಿದಿದೆ.ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ನಿತಿನ್ ಗಡ್ಕರಿ, ರವಿಶಂಕರ ಪ್ರಸಾದ್, ಪ್ರಕಾಶ್ ಜಾವದೇಕರ್, ರಮೇಶ್ ಪೊಕ್ರಿಯಾ, ನಿರ್ಮಲಾ ಸೀತಾರಾಮನ್ ಮೊದಲಾದವರು ಸಭೆಯಲ್ಲಿ ಭಾಗವಹಿಸಿದ್ದಾರೆ.
ಬಿಜೆಪಿ ಸಂಸದೀಯ ಪಕ್ಷ ಸಭೆ
ಬಿಜೆಪಿ ಸಂಸದೀಯ ಪಕ್ಷ ಸಭೆ

ನವದೆಹಲಿ: ಭಾರತೀಯ ಜನತಾ ಪಾರ್ಟಿಯ ಸಂಸದೀಯ ಪಕ್ಷದ ಸಭೆ ಸಂಸತ್ತು ಭವನದಲ್ಲಿ ಮುಂದುವರಿದಿದೆ.ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ನಿತಿನ್ ಗಡ್ಕರಿ, ರವಿಶಂಕರ ಪ್ರಸಾದ್, ಪ್ರಕಾಶ್ ಜಾವದೇಕರ್, ರಮೇಶ್ ಪೊಕ್ರಿಯಾ, ನಿರ್ಮಲಾ ಸೀತಾರಾಮನ್ ಮೊದಲಾದವರು ಸಭೆಯಲ್ಲಿ ಭಾಗವಹಿಸಿದ್ದಾರೆ.


ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ ಪಿ ನಡ್ಡಾ ಅವರು ಅಧಿಕಾರ ವಹಿಸಿಕೊಂಡ ನಂತರ ನಡೆಯುತ್ತಿರುವ ಸಭೆ ಇದಾಗಿದೆ. ಸಂಸದ ಅನಂತ್ ಕುಮಾರ್ ಹೆಗಡೆಯವರು ಮಹಾತ್ಮಾ ಗಾಂಧೀಜಿ ಬಗ್ಗೆ ಹೇಳಿಕೆ ನೀಡಿ ಅದು ತೀವ್ರ ವಿವಾದವುಂಟಾಗಿ ಬಿಜೆಪಿ ನಾಯಕರು ಅವರಲ್ಲಿ ಷರತ್ತುರಹಿತ ಕ್ಷಮೆ ಕೇಳಿ ಎಂದು ನೊಟೀಸ್ ನೀಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. 


ಇಂದಿನ ಬಿಜೆಪಿ ಸಂಸದೀಯ ಸಭೆಯಲ್ಲಿ ಈ ಬಗ್ಗೆ ನಾಯಕರು ಏನು ತೀರ್ಮಾನ ಕೈಗೊಳ್ಳಲಿದ್ದಾರೆ ಎಂಬ ಕುತೂಹಲವಿದೆ. 


ಈ ಮಧ್ಯೆ ಇಂದಿನ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ ವೇಳೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಸಂಸದ ಹಾಗೂ ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲು ನಾವಿಲ್ಲಿಗೆ ಬಂದಿದ್ದೇವೆ. ಅನಂತ್ ಕುಮಾರ್ ಹೆಗಡೆ ಅವರ ಹೇಳಿಕೆ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com