ತಾಕತ್ತಿದ್ದರೆ ನಾಳೆ ಮಧ್ಯಾಹ್ನ 1 ಗಂಟೆಯೊಳಗೆ ಸಿಎಂ ಅಭ್ಯರ್ಥಿ ಘೋಷಿಸಿ: ಬಿಜೆಪಿಗೆ ಕೇಜ್ರಿವಾಲ್​ ಸವಾಲು

ತಾಕತ್ತಿದ್ದರೆ ನಾಳೆ ಮಧ್ಯಾಹ್ನ 1 ಗಂಟೆಯೊಳಗೆ ನಿಮ್ಮ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಿ ಎಂದು ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ಬಿಜೆಪಿಗೆ ಬಹಿರಂಗ ಸವಾಲು ಹಾಕಿದ್ದಾರೆ.
ಕೇಜ್ರಿವಾಲ್
ಕೇಜ್ರಿವಾಲ್

ನವದೆಹಲಿ: ತಾಕತ್ತಿದ್ದರೆ ನಾಳೆ ಮಧ್ಯಾಹ್ನ 1 ಗಂಟೆಯೊಳಗೆ ನಿಮ್ಮ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಿ ಎಂದು ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ಬಿಜೆಪಿಗೆ ಬಹಿರಂಗ ಸವಾಲು ಹಾಕಿದ್ದಾರೆ.

ದೆಹಲಿ ವಿಧಾನಸಭಾ ಚುನಾವಣೆಗೆ ಕೇವಲ 3 ದಿನ ಬಾಕಿ ಇದ್ದು, ಬಿಜೆಪಿ ಮತ್ತು ಆಡಳಿತರೂಢ ಆಮ್ ಆದ್ಮಿ ನಡುವೆ ಜಿದ್ದಾ ಜಿದ್ದಿನ ಹೋರಾಟ ನಡೆಯುತ್ತಿದೆ.

ಬಿಜೆಪಿ ನಾಳೆ ಮಧ್ಯಾಹ್ನ 1 ಗಂಟೆಯೊಳಗೆ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡಲಿ ಎಂದು ಸವಾಲು ಹಾಕಿರುವ ಕೇಜ್ರಿವಾಲ್,  ಒಂದು ವೇಳೆ ಬಿಜೆಪಿ ನನ್ನ ಸವಾಲು ಸ್ವೀಕರಿಸದಿದ್ದರೆ ಮತ್ತೊಂದು ಸುದ್ದಿಗೋಷ್ಠಿ ಕರೆಯುತ್ತೇನೆ. ಈ ವಿಚಾರದ ಕುರಿತಂತೆ ಯಾರೊಂದಿಗೆ ಬೇಕಾದರೂ ಚರ್ಚಿಸಲು ಸಿದ್ದನಿದ್ದೇನೆ ಎಂದು ಹೇಳಿದ್ದಾರೆ.

ಇಂದು ಆಮ್ ಆದ್ಮಿ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕೇಜ್ರಿವಾಲ್, ದೆಹಲಿಯ ಜನರು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂದು ತಿಳಿದುಕೊಳ್ಳಲು ಉತ್ಸುಕರಾಗಿದ್ದಾರೆ. ಹಾಗಾಗಿ ನಾಳೆ ಮಧ್ಯಾಹ್ನ 1ಗಂಟೆಯೊಳಗೆ ಅವರ ಹೆಸರನ್ನು ಪಕ್ಷ ತಿಳಿಸಲಿ ಎಂದಿದ್ದಾರೆ.

ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂದು ಗೊತ್ತಾಗದಿದ್ದರೆ ನಾವೇಕೆ ಆ ಪಕ್ಷಕ್ಕೆ ಮತ ಹಾಕಬೇಕು ಎಂದು ಇಲ್ಲಿನ ಜನರು ಮಾತನಾಡಿಕೊಳ್ಳುತ್ತಿದ್ದಾರೆ. ನೀವು ನಮಗೆ ಮತ ಹಾಕಿದರೆ ನಾವು ಮುಖ್ಯಮಂತ್ರಿ ಯಾರೆಂದು ನಿರ್ಧರಿಸುತ್ತೇವೆ ಎಂದು ಅಮಿತ್​ ಶಾ ಹೇಳಿದ್ದಾರೆ. ಆದರೆ ಪ್ರಜಾಪ್ರಭುತ್ವದಲ್ಲಿ ಮುಖ್ಯಮಂತ್ರಿ ಯಾರಾಗಬೇಕು ಎಂದು ಜನರೇ ನಿರ್ಧರಿಸಬೇಕು ಎಂದು ಅರವಿಂದ್ ಕೇಜ್ರಿವಾಲ್​ ವಾಗ್ದಾಳಿ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com