ಸೋನಿಯಾ ಗಾಂಧಿಗೆ ಉದರ ಸಂಬಂಧಿ ಸೋಂಕಿಗೆ ಚಿಕಿತ್ಸೆ: ಆಸ್ಪತ್ರೆ ವೈದ್ಯರು

ಅನಾರೋಗ್ಯದಿಂದ ಭಾನುವಾರ ಸಂಜೆ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಲ್ಲಿ ಉದರ ಸಂಬಂಧಿ ಸೋಂಕು ಕಾಣಿಸಿಕೊಂಡಿದೆ ಎಂದು ವೈದ್ಯರು ಹೇಳಿದ್ದಾರೆ. 
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ

ನವದೆಹಲಿ: ಅನಾರೋಗ್ಯದಿಂದ ಭಾನುವಾರ ಸಂಜೆ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಲ್ಲಿ ಉದರ ಸಂಬಂಧಿ ಸೋಂಕು ಕಾಣಿಸಿಕೊಂಡಿದೆ ಎಂದು ವೈದ್ಯರು ಹೇಳಿದ್ದಾರೆ. 

ಗಂಗಾರಾಮ್ ಆಸ್ಪತ್ರೆ ಸೋಮವಾರ ಸೋನಿಯಾರ ವೈದ್ಯಕೀಯ ಬುಲೆಟಿನ್ ಬಿಡುಗಡೆ ಮಾಡಿದ್ದು, ಅವರ ಸೋಂಕಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದೆ. 

ಅನಾರೋಗ್ಯದಿಂದಾಗಿ ಸೋನಿಯಾ ಗಾಂಧಿಯವರು ಭಾನುವಾರ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದರು. ಹೊಟ್ಟೆನೋವಿನಿಂದ ಸೋನಿಯಾ ಬಳಲುತ್ತಿದ್ದಾರೆಂದು ಹೇಳಲಾಗುತ್ತಿತ್ತು. 

ಅನಾರೋಗ್ಯದ ಕಾರಣದಿಂದಾಗಿ ಶನಿವಾರ ಕೇಂದ್ರ ಹಣಕಾಸು ಬಜೆಟ್ ಮಂಡನೆಯ ವೇಳೆ ಸಂಸತ್ತಿನಲ್ಲಿ ಸೋನಿಕಾ ಅವರು ಉಪಸ್ಥಿತರಿರಲಿಲ್ಲ. 2011ರಲ್ಲಿ ಸೋನಿಯಾ ಅವರು ಕಾಯಿಲೆಯೊಂದಕ್ಕೆ ಅಮೆರಿಕಾದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆ ಬಳಿಕ ಆರೋಗ್ಯ ತಪಾಸಣೆಗಾಗಿ ಆಗಾಗ ಅಮೆರಿಕಾಕ್ಕೆ ಸೋನಿಯಾ ತೆರಳುತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com