ಅಯೋಧ್ಯಾ ದೇಗುಲ ಟ್ರಸ್ಟ್ ಗೂ ದೆಹಲಿ ಚುನಾವಣೆಗೂ ಸಂಬಂಧವಿಲ್ಲ; ಕೇಂದ್ರ ಸಚಿವ ಜವಡೇಕರ್

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯದ ಮೇಲ್ವಿಚಾರಣೆಗಾಗಿ ಟ್ರಸ್ಟ್ ರಚನೆ ಮಾಡುವ ಸಂಪುಟ ಸಭೆಯ ನಿರ್ಧಾರವನ್ನು ದೆಹಲಿ ಚುನಾವಣಾ ಪ್ರಚಾರಕ್ಕೆ ಸಂಬಂಧ ಕಲ್ಪಿಸುವುದು ಸರಿಯಲ್ಲ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸರಣ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.
ಕೇಂದ್ರ ಸಚಿವ ಜಾವಡೇಕರ್
ಕೇಂದ್ರ ಸಚಿವ ಜಾವಡೇಕರ್

ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯದ ಮೇಲ್ವಿಚಾರಣೆಗಾಗಿ ಟ್ರಸ್ಟ್ ರಚನೆ ಮಾಡುವ ಸಂಪುಟ ಸಭೆಯ ನಿರ್ಧಾರವನ್ನು ದೆಹಲಿ ಚುನಾವಣಾ ಪ್ರಚಾರಕ್ಕೆ ಸಂಬಂಧ ಕಲ್ಪಿಸುವುದು ಸರಿಯಲ್ಲ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸರಣ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.

ಸಂಪುಟ ಸಭೆಯ ನಿರ್ಧಾರಗಳ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಈ ನಿರ್ಧಾರಕ್ಕೂ ದೆಹಲಿ ಚುನಾವಣೆಗೂ ಯಾವುದೇ ಸಂಬಂಧವಿಲ್ಲ. ಇಡೀ ದೇಶದಲ್ಲಿ ಚುನಾವಣೆ ನಡೆಯುತ್ತಿಲ್ಲ. ಸಂಪುಟ ಸಭೆಯಲ್ಲಿ ಅಯೋಧ್ಯೆಯ ರಾಮಮಂದಿರಕ್ಕಾಗಿ ಟ್ರಸ್ಟ್ ರಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಸುಖಾಸುಮ್ಮನೆ ಗೊಂದಲ ಸೃಷ್ಟಿಸುವುದು ಬೇಡ ಎಂದರು.

ದೆಹಲಿ ಚುನಾವಣೆಗೆ ದಿನಗಣನೆ ಆರಂಭವಾಗಿರುವಾಗಿ ಈ ನಿರ್ಧಾರ ಕೈಗೊಂಡಿರುವುದೇಕೆ ಎಂಬ ಪ್ರಶ್ನೆಗೆ ಅವರು ಉತ್ತರಿಸುತ್ತಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com