ದೆಹಲಿ ಚುನಾವಣೆ: ಟ್ವಿಟರ್ ನಲ್ಲಿ 'ಹಿಂದೂ-ಮುಸ್ಲಿಂ' ವಿಡಿಯೋ ಶೇರ್ ಮಾಡಿದ ಕೇಜ್ರಿವಾಲ್ ಗೆ ನೋಟಿಸ್ ನೀಡಿದ ಆಯೋಗ

ಪ್ರತಿಪಕ್ಷಗಳನ್ನು ಗುರಿಯಾಗಿಟ್ಟುಕೊಂಡು ಹಿಂದೂ- ಮುಸ್ಲಿಂ ವಿಡಿಯೋವೊಂದನ್ನು ಟ್ವೀಟರ್ ನಲ್ಲಿ ಶೇರ್ ಮಾಡಿರುವ  ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ  ಚುನಾವಣಾ ಆಯೋಗ ನೋಟಿಸ್ ನೀಡಿದ್ದು, ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಎಂದು ಹೇಳಿದೆ
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್

ನವದೆಹಲಿ: ಪ್ರತಿಪಕ್ಷಗಳನ್ನು ಗುರಿಯಾಗಿಟ್ಟುಕೊಂಡು ಹಿಂದೂ- ಮುಸ್ಲಿಂ ವಿಡಿಯೋವೊಂದನ್ನು ಟ್ವೀಟರ್ ನಲ್ಲಿ ಶೇರ್ ಮಾಡಿರುವ  ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಚುನಾವಣಾ ಆಯೋಗ ನೋಟಿಸ್ ನೀಡಿದ್ದು, ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಎಂದು ಹೇಳಿದೆ

ನಾಳೆ ಸಂಜೆ 5 ಗಂಟೆಯೊಳಗೆ ನೋಟಿಸ್ ಗೆ ಪ್ರತಿಕ್ರಿಯೆ ನೀಡುವಂತೆ ಚುನಾವಣಾ ಆಯೋಗ ಆಮ್ ಆದ್ಮಿ ಪಕ್ಷದ ಮುಖ್ಯಸ್ಥರಿಗೆ ಸೂಚನೆ ನೀಡಿದೆ. ಚುನಾವಣಾ ನೀತಿ ಸಂಹಿತೆಯ ವಿನಾಯಿತಿಗಳನ್ನು ಉಲ್ಲೇಖಿಸಿರುವ ಆಯೋಗ, ಮತಗಳನ್ನು ಪಡೆಯಲು ಜಾತಿ ಅಥವಾ ಕೋಮು ಭಾವನೆಯ ಹೇಳಿಕೆಗಳನ್ನು ನೀಡುವಂತಿಲ್ಲ. ಮಸೀದಿ, ಚರ್ಚ್ , ದೇವಾಲಯ ಅಥವಾ ಇನ್ನಿತರ ಪೂಜಾ ಸ್ಥಳಗಳ ಹೆಸರಿನಲ್ಲಿ ಚುನಾವಣಾ ಪ್ರಚಾರ ಮಾಡಬಾರೆಂದು ಆಯೋಗ ತಿಳಿಸಿದೆ. 

ಫೆಬ್ರವರಿ 3 ರಂದು ಕೇಜ್ರಿವಾಲ್ ಟ್ವಿಟರ್ ನಲ್ಲಿ ಶೇರ್ ಮಾಡಿರುವ ವಿಡಿಯೋ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಬಿಜೆಪಿಯಿಂದ ದೂರು ಸ್ವಿಕರಿಸಿರುವುದಾಗಿ ಆಯೋಗ ಹೇಳಿದೆ. 

ಇದಕ್ಕೂ ಮುನ್ನ ಕೋರ್ಟ್ ಆವರಣದಲ್ಲಿ ಮೊಹಲಾ ಕ್ಲಿನಿಕ್ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿರುವುದು  ಕೂಡಾ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆಯೋಗ ಎಚ್ಚರಿಕೆ ನೀಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com