ಸಿಎಎ ವಿರುದ್ಧ ಮುಂಬೈನಲ್ಲಿ ಪ್ರತಿಭಟನೆ: ಆಯೋಜಕರು, 300 ಮಹಿಳೆಯರ ವಿರುದ್ಧ ಪ್ರಕರಣ ದಾಖಲು

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ವಾಣಿಜ್ಯ ನಗರಿ ಮುಂಬೈನಲ್ಲಿ ಪ್ರತಿಭಟನೆ ನಡೆದಿದ್ದು, ಪ್ರತಿಭಟನೆ ಆಯೋಜನೆ ಮಾಡಿದ್ದ ಹಾಗೂ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ 300 ಮಹಿಳೆಯರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮುಂಬೈ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ವಾಣಿಜ್ಯ ನಗರಿ ಮುಂಬೈನಲ್ಲಿ ಪ್ರತಿಭಟನೆ ನಡೆದಿದ್ದು, ಪ್ರತಿಭಟನೆ ಆಯೋಜನೆ ಮಾಡಿದ್ದ ಹಾಗೂ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ 300 ಮಹಿಳೆಯರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆಂದು ತಿಳಿದುಬಂದಿದೆ.

ಪ್ರತಿಭಟನೆ ವಿರುದ್ಧ ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೋರೇಷನ್ (ಬಿಎಂಸಿ) ಸಹಾಯಕ ಆಯುಕ್ತರು ದೂರು ನೀಡಿದ್ದು, ನಗ್ಪಾಡಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ವರದಿಗಳು ತಿಳಿಸಿವೆ. 

ಪ್ರತಿಭಟನೆಯ ಪರಿಣಾಮ ಪೌರಕಾರ್ಮಿಕರು ನಿರ್ಮಾಣ ಕಾರ್ಯಗಳು ಹಾಗೂ ಇತರೆ ಕಾರ್ಯಗಳನ್ನು ನಡೆಸಲು ಅಡ್ಡಿಯುಂಟಾಗುತ್ತಿದೆ. ರಸ್ತೆ ಮಧ್ಯೆಯೇ ಪ್ರತಿಭಟನಾಕಾರರು ಕುರ್ಚಿಗಳನ್ನು ಹಾಕಿಕೊಂಡಿದ್ದು, ಇದರ ಪರಿಣಾಮ ಸಂಚಾರ ದಟ್ಟಣೆ ಕೂಡ ಎದುರಾಗಿದೆ ಎಂದು ದೂರಿನಲ್ಲಿ ಅಧಿಕಾರಿ ಹೇಳಿಕೊಂಡಿದ್ದಾರೆ. 

ದೂರು ಹಿನ್ನೆಲೆಯಲ್ಲಿ ಪ್ರತಿಭಟನಾಕಾರರ ವಿರುದ್ಧ ಪೊಲೀಸರು ಸೆಕ್ಷನ್ 341, ಸೆಕ್ಷನ್ 313 ಹಾಗೂ ಸೆಕ್ಷನ್ 314 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಗಣರಾಜ್ಯೋತ್ಸವ ದಿನದಿಂದಲೂ ನಗ್ಪಾಡಾದ ಮೊರ್ಲ್ಯಾಂಡ್ ರಸ್ತೆಯಲ್ಲಿ ನೂರಾರು ಮಹಿಳೆಯರು ಪ್ರತಿಭಟನೆ ನಡೆಸುತ್ತಲೇ ಇದ್ದಾರೆ, 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com