'ನನ್ನ ಸಿಕ್ಸ್ತ್‌ ಸೆನ್ಸ್‌ ಹೇಳುತ್ತಿದೆ' ಎಲ್ಲಾ ಮತದಾನೋತ್ತರ ಸಮೀಕ್ಷೆ ಹುಸಿಯಾಗಲಿದೆ: ಮನೋಜ್ ತಿವಾರಿ

ದೆಹಲಿ ವಿಧಾನಸಭಾ ಚುನಾವಣೆಯ ಎಲ್ಲಾ ಮತದಾನೋತ್ತರ ಸಮೀಕ್ಷೆಗಳು ಹುಸಿಯಾಗಲಿದೆ ಎಂದು ದೆಹಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಮನೋಜ್ ತಿವಾರಿ ಶನಿವಾರ ಭವಿಷ್ಯ ನುಡಿದಿದ್ದಾರೆ.

Published: 08th February 2020 10:33 PM  |   Last Updated: 08th February 2020 10:33 PM   |  A+A-


Manoj Tiwari

ಮನೋಜ್ ತಿವಾರಿ

Posted By : Vishwanath S
Source : UNI

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯ ಎಲ್ಲಾ ಮತದಾನೋತ್ತರ ಸಮೀಕ್ಷೆಗಳು ಹುಸಿಯಾಗಲಿದೆ ಎಂದು ದೆಹಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಮನೋಜ್ ತಿವಾರಿ ಶನಿವಾರ ಭವಿಷ್ಯ ನುಡಿದಿದ್ದಾರೆ.

ನನ್ನ ಸಿಕ್ಸ್ತ್ ಸೆನ್ಸ್(ಆರನೇ ಇಂದ್ರಿಯಾ) ಹೇಳುತ್ತಿದೆ ಮತದಾನೋತ್ತರ ಸಮೀಕ್ಷೆಯಂತೆ ಫಲಿತಾಂಶ ಬರುವುದಿಲ್ಲ, 48  ಸ್ಥಾನಗಳಲ್ಲಿ ಜಯಗಳಿಸಿ ಕಮಲ ಪಾಳಯ ದೆಹಲಿಯಲ್ಲಿ ಸರ್ಕಾರ ರಚಿಸಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಮತದಾನೋತ್ತರ ಸಮೀಕ್ಷೆಯಲ್ಲಿ ದೆಹಲಿಯಲ್ಲಿ ಮತ್ತೆ ಆಮ್ ಆದ್ಮಿ ಪಕ್ಷ(ಎಎಪಿ)ಕ್ಕೆ ಸ್ಪಷ್ಟ ಬಹುಮತ ಬರಲಿದ್ದು ಮತ್ತೊಮ್ಮೆ ಅರವಿಂದ್ ಕೇಜ್ರಿವಾಲ್ ಸಿಎಂ ಆಗಿ ದರ್ಬಾರ್ ಮಾಡಲಿದ್ದಾರೆ.

Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp