ಉದ್ಯೋಗದಲ್ಲಿ ಬಡ್ತಿ ಮೀಸಲಾತಿ ಕುರಿತ ಸುಪ್ರೀಂ ತೀರ್ಪಿಗೆ ಖರ್ಗೆ ಖಂಡನೆ: ತಿದ್ದುಪಡಿಗೆ ಒತ್ತಾಯ

ಸರ್ಕಾರಿ ಉದ್ಯೋಗಗಳಲ್ಲಿ ಹಾಗೂ ಬಡ್ತಿ ಮೀಸಲಾತಿ ಪ್ರತಿಪಾದನೆ ಮೂಲಭೂತ ಹಕ್ಕು ಅಲ್ಲ ಎಂದಿರುವ  ಸುಪ್ರೀಂಕೋರ್ಟ್ ತೀರ್ಪನ್ನು ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆ ಕಟುವಾಗಿ ಟೀಕಿಸಿದ್ದಾರೆ. 
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಸರ್ಕಾರಿ ಉದ್ಯೋಗಗಳಲ್ಲಿ ಹಾಗೂ ಬಡ್ತಿ ಮೀಸಲಾತಿ ಪ್ರತಿಪಾದನೆ ಮೂಲಭೂತ ಹಕ್ಕು ಅಲ್ಲ ಎಂದಿರುವ  ಸುಪ್ರೀಂಕೋರ್ಟ್ ತೀರ್ಪನ್ನು ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆ ಕಟುವಾಗಿ ಟೀಕಿಸಿದ್ದಾರೆ. 

ಕೇಂದ್ರ ಸರ್ಕಾರ  ಸಾಮಾಜಿಕ ನ್ಯಾಯದ ದೃಷ್ಟಿಯಿಂದ‌ ತಕ್ಷಣ ತಿದ್ದುಪಡಿ ತರಬೇಕು,ಸಂವಿಧಾನ ಪೀಠದ ಮುಂದೆ ಪ್ರಕರಣ ಒಯ್ಯಬೇಕು ಎಂದು ಒತ್ತಾಯಿಸಿದ್ದಾರೆ

ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು, ಇಂತಹ ಪರಿಸ್ಥಿತಿ ನಿರ್ಮಾಣವಾಗಲು ಕೇಂದ್ರದ ಬಿಜೆಪಿ ಸರ್ಕಾರವೇ ಕಾರಣ. ಈ ಬಗ್ಗೆ ಗೃಹ ಸಚಿವರು ಮತ್ತು ಸಮಾಜ  ಕಲ್ಯಾಣ ಸಚಿವರು ಮೀಸಲಾತಿ ವಿಚಾರದಲ್ಲಿ ನಾವು ಮಧ್ಯಪ್ರವೇಶಿಸುವುದಿಲ್ಲ ಎಂಬ  ಕೇಂದ್ರದ ತೀರ್ಮಾನ ಖಂಡನೀಯ ಎಂದರು. 

ಪರಿಶಿಷ್ಟರು ಮತ್ತು ಹಿಂದುಳಿದವರ ರಕ್ಷಣೆ ಮಾಡದ ಸರ್ಕಾರ  ಯಾವ ರೀತಿಯದ್ದು ಎಂದು ಮಲ್ಲಿಕಾರ್ಜುನ ಖರ್ಗೆ  ಪ್ರಶ್ನಿಸಿದರು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com