ಜಮ್ಮು-ಕಾಶ್ಮೀರ: ಗಡಿಯಲ್ಲಿ ಪಾಕ್ ಉದ್ಧಟತನ, ಶೆಲ್ ದಾಳಿಗೆ ಓರ್ವ ಯೋಧ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಉದ್ಧಟತನ ಪ್ರದರ್ಶಿಸಿದ್ದು, ಭಾರತೀಯ ಸೇನೆಯನ್ನು ಗುರಿಯಾಗಿರಿಸಿ ಅಪ್ರಚೋದಿತ ಶೆಲ್ ಹಾಗೂ ಗುಂಡಿನ ದಾಳಿ ನಡೆಸಿದೆ. ಶೆಲ್ ದಾಳಿ ಪರಿಣಾಮ ಓರ್ವ ಯೋಧ ಹುತಾತ್ಮರಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಉದ್ಧಟತನ ಪ್ರದರ್ಶಿಸಿದ್ದು, ಭಾರತೀಯ ಸೇನೆಯನ್ನು ಗುರಿಯಾಗಿರಿಸಿ ಅಪ್ರಚೋದಿತ ಶೆಲ್ ಹಾಗೂ ಗುಂಡಿನ ದಾಳಿ ನಡೆಸಿದೆ. ಶೆಲ್ ದಾಳಿ ಪರಿಣಾಮ ಓರ್ವ ಯೋಧ ಹುತಾತ್ಮರಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ಶನಿವಾರ ಮಧ್ಯಾಹ್ನ 3.45ರ ಸುಮಾರಿಗೆ ಪಾಕಿಸ್ತಾನ ಸೇನೆ ಗಡಿಯಲ್ಲಿ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಮಾರ್ಟರ್ ಶೆಲ್ ಗಳಿಂದ ದಾಳಿ ನಡೆಸಿದೆ ಎಂದು ಅಧಿಕಾರಿಘಲು ಮಾಹಿತಿ ನೀಡಿದ್ದಾರೆ. 

ಪೂಂಚ್ ಜಿಲ್ಲೆಯ ದೆಗ್ವಾರ್ ಸೆಕ್ಟರ್ ಬಳಿಕ ದಾಳಿ ನಡೆಸಿದ್ದು, ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು ವರದಿಗಳು ತಿಳಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com