ಪಿಎಸ್ಎ ಅಡಿ ಒಮರ್ ಅಬ್ದುಲ್ಲಾ ಬಂಧನ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರಿ

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರನ್ನು ಸಾರ್ವಜನಿಕ ಸುರಕ್ಷತಾ ಕಾಯ್ದೆ (ಪಿಎಸ್ಎ) ಅಡಿಯಲ್ಲಿ ಬಂಧಿಸಿರುವ ಕ್ರಮ ಪ್ರಶ್ನಿಸಿ ಅವರ ಸಹೋದರಿ ಸಾರಾ ಅಬ್ದುಲ್ಲಾ ಪೈಲಟ್ ಸುಪ್ರೀಂ ಕೋರ್ಟ್ ಗೆ ಮೊರೆ ಹೋಗಿದ್ದಾರೆ.
ಒಮರ್ ಅಬ್ದುಲ್ಲಾ
ಒಮರ್ ಅಬ್ದುಲ್ಲಾ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರನ್ನು ಸಾರ್ವಜನಿಕ ಸುರಕ್ಷತಾ ಕಾಯ್ದೆ (ಪಿಎಸ್ಎ) ಅಡಿಯಲ್ಲಿ ಬಂಧಿಸಿರುವ ಕ್ರಮ ಪ್ರಶ್ನಿಸಿ ಅವರ ಸಹೋದರಿ ಸಾರಾ ಅಬ್ದುಲ್ಲಾ ಪೈಲಟ್ ಸುಪ್ರೀಂ ಕೋರ್ಟ್ ಗೆ ಮೊರೆ ಹೋಗಿದ್ದಾರೆ.

ತಕ್ಷಣ ಅವರನ್ನು  ಬಂಧನದಿಂದ  ಬಿಡುಗಡೆ ಮಾಡುವಂತೆ ಅವರು ಸಾರಾ ಮನವಿ ಮಾಡಿದ್ದಾರೆ. 

ಅಬ್ದುಲ್ಲ ಬಂಧನ ವಾಕ್ ಸ್ವಾತಂತ್ರ್ಯ ಸೇರಿದಂತೆ ಸಾಂವಿಧಾನಿಕ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ ಮತ್ತು ಇದು ಎಲ್ಲಾ ರಾಜಕೀಯ ಪ್ರತಿಸ್ಪರ್ಧಿಗಳನ್ನು ಹತ್ತಿಕ್ಕುವ, ನಿಯಂತ್ರಿಸುವ ಹುನ್ನಾರವಾಗಿದೆ ಎಂದೂ ಅವರು ಆಪಾದಿಸಿದ್ದಾರೆ. 

ಆಗಸ್ಟ್ 5ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ರದ್ದುಪಡಿಸಿದ ನಂತರ ಒಮರ್ ಅಬ್ದುಲ್ಲಾರನ್ನು ಬಂಧಿಸಲಾಗಿತ್ತು. ಕಳೆದ ವಾರ ಪಿಎಸ್ಎ ಕಾಯ್ದೆಯನ್ವಯ ಬಂಧನದ ಅವಧಿಯನ್ನು ವಿಸ್ತರಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com