ದೆಹಲಿ ಚುನಾವಣಾ ಫಲಿತಾಂಶದ ನಡುವೆ ಶಾಹೀನ್ ಬಾಗ್ ನಲ್ಲಿ ಮೌನ ಪ್ರತಿಭಟನೆ 

ದೆಹಲಿ ವಿಧಾನಸಭಾ ಚುನಾವಣೆಗೆ ಮತ ಎಣಿಕೆ ನಡೆಯುತ್ತಿರುವಂತೆ ರಾಜಧಾನಿ ಶಾಹೀನ್ ಬಾಗ್ ನಲ್ಲಿ ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಳೆದ ಎರಡು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿರುವ ಮಹಿಳಾ ಪ್ರತಿಭಟನಾಕಾರರು ಇಂದು ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ.
ಮಹಿಳಾ ಪ್ರತಿಭಟನಾಕಾರರು
ಮಹಿಳಾ ಪ್ರತಿಭಟನಾಕಾರರು

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಗೆ ಮತ ಎಣಿಕೆ ನಡೆಯುತ್ತಿರುವಂತೆ ರಾಜಧಾನಿ ಶಾಹೀನ್ ಬಾಗ್ ನಲ್ಲಿ ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಳೆದ ಎರಡು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿರುವ ಮಹಿಳಾ ಪ್ರತಿಭಟನಾಕಾರರು ಇಂದು ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ.

ಬೆಳಗ್ಗೆಯಿಂದಲೂ ಮೌನ ವಹಿಸಿರುವ ಪ್ರತಿಭಟನಾಕಾರರು, ಪ್ರತಿಭಟನೆ ವೇಳೆಯಲ್ಲಿ ಯಾವುದೇ ವ್ಯಕ್ತಿಯೂ ಮಾತನಾಡಲಿಲ್ಲ.
ಜನರಿಗೆ ತಪ್ಪು ಸಂದೇಶ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಪ್ರತಿಭಟನಾಕಾರರು ನಿರಾಕರಿಸಿದ್ದು, ಜಾಮಿಯಾ ಹಿಂಸಾಚಾರ ಹಾಗೂ ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ ಮೌನ ಪ್ರತಿಭಟನೆ ನಡೆಸುತ್ತಿರುವುದಾಗಿ ಬಾಲಕನೊಬ್ಬ ಫ್ಲೇ ಕಾರ್ಡ್  ಪ್ರದರ್ಶನದ ಮೂಲಕ ತಿಳಿಸಿದ್ದಾನೆ.

ದೆಹಲಿ ಚುನಾವಣೆಗೆ ಸಂಬಂಧಿಸಿದಂತೆ ಮಾತನಾಡಿದ ಪ್ರತಿಭಟನಾಕಾರರೊಬ್ಬರು, ಯಾವುದೇ ರಾಜಕೀಯ ಪಕ್ಷವನ್ನು ಬೆಂಬಲಿಸುವುದಿಲ್ಲ ಎಂದು ತಿಳಿಸಿದರು. ಇಂದು ಬೆಳಗ್ಗೆಯಿಂದ ರಾತ್ರಿಯವರೆಗೂ ಪ್ರತಿಭಟನೆ ಮುಂದುವರೆಯಲಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com