ಚುನಾವಣಾ ಗೆಲುವಿನ ಸಂಭ್ರಮದ ವೇಳೆ ಪಟಾಕಿ ಸಿಡಿಸದಿರಿ: ಕಾರ್ಯಕರ್ತರಿಗೆ ಕೇಜ್ರಿವಾಲ್ ಮನವಿ

ರಾಜಧಾನಿ ದೆಹಲಿಯಲ್ಲಿ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಮತ್ತೆ ಅಧಿಕಾರಕ್ಕೆ ಬರುವುದು ಬಹುತೇಕ ಖಚಿತವಾಗುತ್ತಿರುವ ಹಿನ್ನೆಲೆಯಲ್ಲಿ ಗೆಲುವಿನ ಸಂಭ್ರಮದ ವೇಳೆ ಪಟಾಕಿ ಸಿಡಿಸದಂತೆ ಅರವಂದ ಕೇಜ್ರಿವಾಲ್ ಅವರು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. 
ಕೇಜ್ರಿವಾಲ್
ಕೇಜ್ರಿವಾಲ್

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಮತ್ತೆ ಅಧಿಕಾರಕ್ಕೆ ಬರುವುದು ಬಹುತೇಕ ಖಚಿತವಾಗುತ್ತಿರುವ ಹಿನ್ನೆಲೆಯಲ್ಲಿ ಗೆಲುವಿನ ಸಂಭ್ರಮದ ವೇಳೆ ಪಟಾಕಿ ಸಿಡಿಸದಂತೆ ಅರವಂದ ಕೇಜ್ರಿವಾಲ್ ಅವರು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. 

ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಂಭ್ರಮದ ವೇಳೆ ಪಟಾಕಿ ಸಿಡಿಸದಂತೆ ಕಾರ್ಯಕರ್ತರಿಗೆ ಕೇಜ್ರಿವಾಲ್ ಸೂಚಿಸಿದ್ದಾರೆ. 

ಚುನಾವಣಾ ಸಮೀಕ್ಷಾ ವರದಿಗಳೂ ಕೂಡ ಆಮ್ ಆದ್ಮಿ ಪಕ್ಷದ ಪರವಾಗಿರುವ ಹಿನ್ನೆಲೆಯಲ್ಲಿ ಮತಎಣಿಕೆ ಪ್ರಕ್ರಿಯೆ ಆರಂಭಕ್ಕೂ ಮುನ್ನವೇ ಆಪ್ ಕಾರ್ಯಕರ್ತರು ಭರ್ಜರಿ ಸಂಭ್ರಮಕ್ಕೆ ತಯಾರಿ ನಡೆಸಿದ್ದಾರೆ. ಇದೀಗ ಮತಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದುೀ, ಬಹುತೇಕ ಕಡೆ ಆಪ್ ಮುನ್ನಡೆ ಕಾಯ್ದುಕೊಂಡಿದೆ.

ಹೀಗಾಗಿ ವಾಯು ಮಾಲಿನ್ಯ ಸಮಸ್ಯೆಯಿಂದ ರಾಜಧಾನಿ ಬಳಲುತ್ತಿದ್ದು, ಪರಿಸರ ಮಾಲೀನ್ಯಕ್ಕೆ ಮತ್ತಷ್ಟು ಮಾಲಿನ್ಯ ಸೇರಿಸಬಾರದೆಂಬ ಕಾರಣಕ್ಕೆ ಕೇಜ್ರಿವಾಲ್ ಈ ಸೂಚನೆ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com