ನಿರ್ಭಯಾ ಪ್ರಕರಣ: ನಾಲ್ವರು ಅಪರಾಧಿಗಳಿಗೆ ಸುಪ್ರೀಂ ನೋಟೀಸ್

ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನಾಲ್ವರು ನಿರ್ಭಯಾ ಅಪರಾಧಿಗ ಳಪ್ರತಿಕ್ರಿಯೆ ಕೋರಿ ನೊಟೀಸ್ ಜಾರಿ ಮಾಡಿದೆ.

Published: 11th February 2020 03:54 PM  |   Last Updated: 11th February 2020 03:58 PM   |  A+A-


Posted By : Raghavendra Adiga
Source : PTI

ನವದೆಹಲಿ: ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನಾಲ್ವರು ನಿರ್ಭಯಾ ಅಪರಾಧಿಗಳ ಪ್ರತಿಕ್ರಿಯೆ ಕೋರಿ ನೊಟೀಸ್ ಜಾರಿ ಮಾಡಿದೆ.

ನ್ಯಾಯಮೂರ್ತಿ ಆರ್ ಬಾನುಮತಿ ನೇತೃತ್ವದ ಮೂರು ನ್ಯಾಯಾಧೀಶರ ಪೀಠವು ಈ ಅಪರಾಧಿಗಳ ಮರಣದಂಡನೆಗೆ ಹೊಸ ದಿನಾಂಕವನ್ನು ನೀಡಲು ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸಲು ಅಧಿಕಾರಿಗಳಿಗೆ ಅನುಮತಿ ನೀಡಿದೆ.

ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಎ ಎಸ್ ಬೋಪಣ್ಣ ಅವರನ್ನೂ ಒಳಗೊಂಡ ನ್ಯಾಯಪೀಠವು ಕೇಂದ್ರ ಮತ್ತು ದೆಹಲಿ ಸರ್ಕಾರವು ಸಲ್ಲಿಸಿದ ಮೇಲ್ಮನವಿಯನ್ನು ವಿಚಾರಣೆಗೆ ಒಳಪಡಿಸುವ ಮೊದಲು ವಿಚಾರಣಾ ನ್ಯಾಯಾಲಯವು ಅಪರಾಧಿಗಳ ಮರಣದಂಡನೆಗೆ ಹೊಸ ದಿನಾಂಕವನ್ನು ನೀಡಲು ಇದು ಅಡ್ಡಿಯಲ್ಲ ಎಂದು ಸ್ಪಷ್ಟಪಡಿಸಿತು

ಕೇಂದ್ರ ಮತ್ತು ದೆಹಲಿ ಸರ್ಕಾರದ ಪರ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಈ ಅಪರಾಧಿಗಳ ಮರಣದಂಡನೆ  "ಸಂತೋಷಕ್ಕಾಗಿ" ಅಲ್ಲ, ಅಧಿಕಾರಿಗಳು ಕಾನೂನಿನ ಆದೇಶವನ್ನು ಕಾರ್ಯಗತಗೊಳಿಸುತ್ತಿದ್ದಾರೆ ಎಂದು ಹೇಳಿದರು.

Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp