ಸಿಎಎ ಬಿಕ್ಕಟ್ಟು: ಸಮಗ್ರತೆ-ಐಕ್ಯತೆ ಎತ್ತಿಹಿಡಿಯುವುದೂ ಮೂಲಭೂತ ಹಕ್ಕು, ನ್ಯಾಯಾಧೀಶರಲ್ಲಿ ನಂಬಿಕೆಯಿಡಿ: ರಂಜನ್ ಗೊಗೋಯ್

ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಉದ್ಭವಿಸಿರುವ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಜನತೆ ಕೋರ್ಟ್ ಮತ್ತು ನ್ಯಾಯಾಧೀಶರನ್ನು ನಂಬಬೇಕು, ವಿಶ್ವಾಸವಿಡಬೇಕು ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಹೇಳಿದ್ದಾರೆ.
ನಿವೃತ್ತ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್
ನಿವೃತ್ತ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಉದ್ಭವಿಸಿರುವ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಜನತೆ ಕೋರ್ಟ್ ಮತ್ತು ನ್ಯಾಯಾಧೀಶರನ್ನು ನಂಬಬೇಕು, ವಿಶ್ವಾಸವಿಡಬೇಕು ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಹೇಳಿದ್ದಾರೆ.

"ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ದೇಶದ ಮಹತ್ವದ ವಿಷಯಗಳಲ್ಲಿ ಒಂದಾಗಿದೆ. ಸಮಸ್ಯೆಯ ಪರಿಹಾರವು ಸಾಂವಿಧಾನಿಕ ವಿಧಾನಗಳ ಮೂಲಕ ಆಗಬೇಕು ಈ ವಿಷಯವು ಸುಪ್ರೀಂ ಕೋರ್ಟ್ ಮುಂದೆ ಬಾಕಿ ಇದೆ. ಜನತೆ ನ್ಯಾಯಾಧೀಶರನ್ನು ನಂಬಬೇಕು ವಿಶ್ವಾಸವಿಡಬೇಕು ಎಂದೂ ಅವರು ಗುಜರಾತ್ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಂಜನ್ ಗೊಗೋಯ್ ಹೇಳಿದ್ದಾರೆ .

'ದೇಶದ ಏಕತೆ ಮತ್ತು ಸಮಗ್ರತೆಯನ್ನು ಎತ್ತಿ ಹಿಡಿಯುವುದು ಕೂಡ ಮೂಲಭೂತ ಹಕ್ಕುಗಳಲ್ಲಿ ಒಂದು. ಪೌರತ್ವ ಕಾಯ್ದೆ ತಿದ್ದುಪಡಿ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳ ಮೂಲಕ ಜನರು ಎರಡು ಪರ್ಯಾಯ ವ್ಯವಸ್ಥೆಗಳು ಉಂಟಾಗುವಂತೆ ಮಾಡಬಾರದು. ಸುಪ್ರೀಂಕೋರ್ಟ್‌ ಈ ಬಗ್ಗೆ ವಿಚಾರಣೆ ನಡೆಸುತ್ತಿದೆ. ಕಾಯ್ದೆಯ ಬಗ್ಗೆ ಸಾಂವಿಧಾನಿಕವಾಗಿಯೇ ಪರಿಹಾರ ಕಂಡುಕೊಳ್ಳಬೇಕು ಎಂದರು. ಅಸ್ಸಾಂನಲ್ಲಿ ನಡೆದ ಪ್ರತಿಭಟನೆಗಳನ್ನು ಉಲ್ಲೇಖೀಸಿ ಮಾತನಾಡಿದ ಅವರು, ಕೆಲವೊಂದು ಅಂಶಗಳು ದೇಶದ ಐಕ್ಯತೆ ಮತ್ತು ಸಮಗ್ರತೆಗೆ ಧಕ್ಕೆ ತರುತ್ತವೆ ಎಂದರು. 

ಸದ್ಯ ಪ್ರಕರಣ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಯ ಹಂತದಲ್ಲಿದೆ. ಹೀಗಿರುವಾಗ ಪ್ರತಿಭಟನಾಕಾರರು ಎರಡು ಪರ್ಯಾಯ ವ್ಯವಸ್ಥೆಗಳು ಸೃಷ್ಟಿಯಾಗುವಂತೆ ಮಾಡಬಾರದು ಎಂದು ಸಲಹೆ ನೀಡಿದ್ದಾರೆ. ಜತೆಗೆ, ಅಸ್ಸಾಂನಲ್ಲಿ ಪ್ರತಿಭಟನೆ ಸ್ಥಗಿತಗೊಳ್ಳುವಲ್ಲಿ ವಿದ್ಯಾರ್ಥಿಗಳ ಪಾತ್ರವನ್ನು ರಂಜನ್ ಗೊಗೋಯ್ ಕೊಂಡಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com