ದೆಹಲಿ ಚುನಾವಣಾ ಫಲಿತಾಂಶಕ್ಕೆ ನಾನೇ ಹೊಣೆ: ಬಿಜೆಪಿ ಮುಖಂಡ ಮನೋಜ್ ತಿವಾರಿ

ತೀವ್ರ ಕುತೂಹಲ ಕೆರಳಿಸಿದ್ದ ದೆಹಲಿ ವಿಧಾನಸಭೆ ಚುನಾವಣೆ 2020ರ ಫಲಿತಾಂಶ ಪ್ರಕಟವಾಗುತ್ತಿದ್ದು, ಚುನಾವಣೆಯಲ್ಲಿನ ಬಿಜೆಪಿ ಪಕ್ಷದ ಹಿನ್ನಡೆಗೆ ನಾನೇ ನೌತಿಕ ಜವಾಬ್ದಾರಿ ಹೊರುವುದಾಗಿ ಬಿಜೆಪಿ ಮುಖಂಡ ಮನೋಜ್ ತಿವಾರಿ ಹೇಳಿದ್ದಾರೆ.

Published: 11th February 2020 11:01 AM  |   Last Updated: 11th February 2020 11:01 AM   |  A+A-


Whatever outcome, I'm responsible: Manoj Tiwari

ದೆಹಲಿ ಬಿಜೆಪಿ ಆಧ್ಯಕ್ಷ ಮನೋಜ್ ತಿವಾರಿ

Posted By : Srinivasamurthy VN
Source : ANI

ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ದೆಹಲಿ ವಿಧಾನಸಭೆ ಚುನಾವಣೆ 2020ರ ಫಲಿತಾಂಶ ಪ್ರಕಟವಾಗುತ್ತಿದ್ದು, ಚುನಾವಣೆಯಲ್ಲಿನ ಬಿಜೆಪಿ ಪಕ್ಷದ ಹಿನ್ನಡೆಗೆ ನಾನೇ ನೌತಿಕ ಜವಾಬ್ದಾರಿ ಹೊರುವುದಾಗಿ ಬಿಜೆಪಿ ಮುಖಂಡ ಮನೋಜ್ ತಿವಾರಿ ಹೇಳಿದ್ದಾರೆ.

ದೆಹಲಿ ವಿಧಾನಸಭೆ ಚುನಾವಣೆ 2020ರ ಫಲಿತಾಂಶ ಪ್ರಕಟವಾಗುತ್ತಿದ್ದು, ಈ ವರೆಗಿನ ಫಲಿತಾಂಶದ ಅನ್ವಯ ದೆಹಲಿಯ ಒಟ್ಟು 70 ಕ್ಷೇತ್ರಗಳ ಪೈಕಿ ಆಮ್ ಆದ್ಮಿ ಪಕ್ಷ 53 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಮತ್ತೊಮ್ಮೆ ಅಧಿಕಾರದ ಗದ್ದುಗೆಯತ್ತ ದಾಪುಗಾಲಿರಿಸಿದೆ. ಇನ್ನು ಬಿಜೆಪಿ ಕೇವಲ 17 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಪಕ್ಷ ಇನ್ನೂ ಖಾತೆಯನ್ನೇ ತೆರೆಯದೇ ಶೂನ್ಯ ಸಂಪಾದನೆಯಲ್ಲಿದೆ.

ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ ರಾಷ್ಟ್ಪೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಿಗೆ ತೀವ್ರ ಹಿನ್ನಡೆಯಾಗಿದ್ದು, ಪ್ರಮುಖವಾಗಿ ಕೇಂದ್ರದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷಕ್ಕೆ ತೀವ್ರ ಮುಖಭಂಗವಾಗಿದೆ. ಅದರಲ್ಲೂ ಕಳೆದ ಬಾರಿಯ ಚುನಾವಣೆಯಲ್ಲಿ 21 ಕ್ಷೇತ್ರಗಳಲ್ಲಿ ಗೆದಿದ್ದ ಕಾಂಗ್ರೆಸ್ ಈ ಬಾರಿ ಶೂನ್ಯ ಸಂಪಾದನೆ ಮಾಡಿ ತೀವ್ರ ಮುಜುಗರಕ್ಕೀಡಾಗಿದೆ.

ಫಲಿತಾಂಶದದ ಕುರಿತಂತೆ ಮಾತನಾಡಿದ ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ ಮನೋಜ್ ತಿವಾರಿ ಅವರು, ಈ ರೀತಿಯ ಫಲಿತಾಂಶ ನಿರೀಕ್ಷಿಸಿರಲಿಲ್ಲ. ಆದರೆ ಸಂಪೂರ್ಣ ಫಲಿತಾಂಶ ಪ್ರಕಟಕ್ಕೆ ಇನ್ನೂ ಸಮಯವಿದೆ. ಬಿಜೆಪಿ ಕಮ್ ಬ್ಯಾಕ್ ಮಾಡುವ ಭರವಸೆಯಲ್ಲಿದ್ದೇವೆ. ಆದರೆ ಫಲಿತಾಂಶ ಏನೇ ಬಂದರೂ ನಾನು ನೈತಿಕ ಹೊಣೆ ಹೊರುತ್ತೇನೆ ಎಂದು ಮನೋಜ್ ತಿವಾರಿ ಹೇಳಿದ್ದಾರೆ.

Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp