ಕೇಜ್ರಿವಾಲ್ ಪ್ರಮಾಣವಚನಕ್ಕೆ 'ಬೇಬಿ ಮಫ್ಲರ್ ಮ್ಯಾನ್'ಗೂ ಆಹ್ವಾನ ನೀಡಿದ ಆಪ್

ಇತ್ತೀಚಿಗೆ ನಡೆದ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಮೂರನೇ ಬಾರಿಗೆ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಅರವಿಂದ್ ಕೇಜ್ರಿವಾಲ್ ಅವರ ಸಮಾರಂಭಕ್ಕೆ ವಿಶೇಷ ಅತಿಥಿಯೊಬ್ಬರಿಗೆ ಆಮ್ ಆಮ್ ಪಕ್ಷ ಆಹ್ವಾನ ನೀಡಿದೆ.
ಬೇಬಿ ಮಫ್ಲರ್ ಮ್ಯಾನ್
ಬೇಬಿ ಮಫ್ಲರ್ ಮ್ಯಾನ್

ನವದೆಹಲಿ: ಇತ್ತೀಚಿಗೆ ನಡೆದ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಮೂರನೇ ಬಾರಿಗೆ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಅರವಿಂದ್ ಕೇಜ್ರಿವಾಲ್ ಅವರ ಸಮಾರಂಭಕ್ಕೆ ವಿಶೇಷ ಅತಿಥಿಯೊಬ್ಬರಿಗೆ ಆಮ್ ಆಮ್ ಪಕ್ಷ ಆಹ್ವಾನ ನೀಡಿದೆ.

ಫೆಬ್ರವರಿ 11ರಂದು ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶದ ವೇಳೆ ದೇಶದ ಗಮನ ಸೆಳೆದಿದ್ದ ಬೇಬಿ ಮಫ್ಲರ್ ಮ್ಯಾನ್​ಗೆ ಅರವಿಂದ ಕೇಜ್ರಿವಾಲ್ ಅವರ ಪ್ರಮಾಣವಚನ ಸಮಾರಂಭಕ್ಕೆ ಆಹ್ವಾನ ನೀಡಲಾಗಿದೆ.

ಅರವಿಂದ ಕೇಜ್ರಿವಾಲ್ ಅವರು ದೆಹಲಿಯ ಮುಖ್ಯಮಂತ್ರಿಯಾಗಿ ಭಾನುವಾರ ಬೆಳಗ್ಗೆ 10 ಗಂಟೆಗೆ ರಾಮಲೀಲಾ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಭಾರಿ ಪ್ರಮಾಣದ ಜನ ಸೇರುವ ನಿರೀಕ್ಷೆ ಇದೆ. ಈ ಕಾರ್ಯಕ್ರಮದಲ್ಲಿ ಬೇಬಿ ಮಫ್ಲರ್ ಮ್ಯಾನ್ ವಿಶೇಷ ಅತಿಥಿಯಾಗಿ ಕಾಣಿಸಲಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿ ಘೋಷಿಸಿದೆ.

ಈ ಸಂಬಂಧ ಆಮ್​ ಆದ್ಮಿ ಪಾರ್ಟಿಯ ಟ್ವಿಟರ್ ಹ್ಯಾಂಡಲ್​ನಲ್ಲಿ ಒಂದು ಟ್ವೀಟ್​ ಗಮನಸಳೆದಿದೆ. ಬಿಗ್​ ಅನೌನ್ಸ್​ಮೆಂಟ್ ಶೀರ್ಷಿಕೆಯ ಟ್ವೀಟ್​ನಲ್ಲಿ ಬೇಬಿ ಮಫ್ಲರ್ ಮ್ಯಾನ್ ಅವರನ್ನು ಫೆಬ್ರವರಿ 16ರಂದು ನಡೆಯುವ ಅರವಿಂದ ಕೇಜ್ರಿವಾಲ್ ಅವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ ಎಂದು ತಿಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com